ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಿಂದೂ ದೇಗುಲಗಳ ಹಣವೇ ಬೇಕೆ?

ಪ್ರಕೋಪ ದೇಣಿಗೆ: ಸರ್ಕಾರದ ಕ್ರಮ ಪ್ರಶ್ನಿಸಿ ಪಿಐಎಲ್‌
Last Updated 6 ಸೆಪ್ಟೆಂಬರ್ 2018, 19:14 IST
ಅಕ್ಷರ ಗಾತ್ರ

ಬೆಂಗಳೂರು: ಮುಜರಾಯಿ ಇಲಾಖೆ ಅಧೀನದಲ್ಲಿರುವ ಆಯ್ದ 81 ಅಧಿಸೂಚಿತ ದೇವಾಲಯಗಳ ₹ 12.30 ಕೋಟಿ ಮೊತ್ತವನ್ನು ಮುಖ್ಯಮಂತ್ರಿ ಪರಿಹಾರ ನಿಧಿಗೆ ವರ್ಗಾಯಿಸುವ ಸಂಬಂಧ ಮುಜರಾಯಿ ಇಲಾಖೆ ಹೊರಡಿಸಿರುವ ಆದೇಶ ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್‌) ಸಲ್ಲಿಸಲಾಗಿದೆ.

ಮಲ್ಲೇಶ್ವರದ ‘ಭಾರತ ಪುನರುತ್ಥಾನ ಟ್ರಸ್ಟ್‌’ನ ಟ್ರಸ್ಟಿ ಗಿರೀಶ್ ಭಾರದ್ವಾಜ್ ಸಲ್ಲಿಸಿರುವ ಈ ಪಿಐಎಲ್‌ ಇನ್ನೂ ವಿಚಾರಣೆಗೆ ಬರಬೇಕಿದೆ.

‘ಸರ್ಕಾರ ಕೇವಲ ಹಿಂದೂ ದೇವಾಲಯಗಳನ್ನು ಗುರಿಯಾಗಿಸಿಕೊಂಡು ಈ ಅಧಿಸೂಚನೆ ಹೊರಡಿಸಿದೆ. ಈ ನಡೆ ತಾರತಮ್ಯದಿಂದ ಕೂಡಿದೆ. ಇದು ಕಾನೂನು ಬಾಹಿರ. ಆದ್ದರಿಂದ ಈ ಆದೇಶ ರದ್ದುಪಡಿಸಬೇಕು’ ಎಂದು ಅರ್ಜಿದಾರರು ಕೋರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT