ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅನರ್ಹ ಶಾಸಕರಿಗೂ- ಬಿಜೆಪಿಗೂ ಸಂಬಂಧವಿಲ್ಲ: ಸವದಿ

Last Updated 25 ಅಕ್ಟೋಬರ್ 2019, 12:43 IST
ಅಕ್ಷರ ಗಾತ್ರ

ಬೆಳಗಾವಿ: ‘ಅನರ್ಹ ಶಾಸಕರಿಗೂ ಬಿಜೆಪಿಗೂ ಯಾವುದೇ ಸಂಬಂಧವಿಲ್ಲ’ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದರು.

ಸುಪ್ರೀಂಕೋರ್ಟ್‌ನಲ್ಲಿ ಅನರ್ಹ ಶಾಸಕರ ಅರ್ಜಿ ವಿಚಾರಣೆ ನಡೆಯುತ್ತಿರುವ ಕುರಿತು ಇಲ್ಲಿ ಶುಕ್ರವಾರ ಪ್ರತಿಕ್ರಿಯಿಸಿದ ಅವರು, ‘ಅವರ ಬಗ್ಗೆ ನಾವ್ಯಾಕೆ ಚಿಂತೆ ಮಾಡಬೇಕು? ಅಂತಹ ಅಗತ್ಯ ನಮಗಿಲ್ಲ’ ಎಂದರು.

‘ಅನರ್ಹ ಶಾಸಕರು ನಮ್ಮ ಪಕ್ಷಕ್ಕೆ ಬರುವ ಕುರಿತು ಎಲ್ಲೂ ಹೇಳಿಲ್ಲ. ಸ್ಪೀಕರ್ ಅನರ್ಹಗೊಳಿಸಿದ್ದಕ್ಕೆ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ. ಕಾಂಗ್ರೆಸ್‌ನಿಂದಅನ್ಯಾಯವಾಗಿದ್ದಕ್ಕೆ ಕಾನೂನು ಹೋರಾಟ ಮಾಡುತ್ತಿದ್ದಾರೆ. ಅದು ಅವರ ನಡುವಿನ ವ್ಯಾಜ್ಯ. ಹೀಗಾಗಿ, ಇದಕ್ಕೂ ನಮಗೂ ಸದ್ಯಕ್ಕೆ ಸಂಬಂಧವಿಲ್ಲ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT