ಬೆಂಗಳೂರು: ‘ಮಾನವ-ವನ್ಯಜೀವಿ ಸಂಘರ್ಷ ತಡೆಗೆ ಆಯ್ದ ವನ್ಯಜೀವಿಗಳ ಸಂತಾನಶಕ್ತಿ ಹರಣದ ಅಗತ್ಯ ಕುರಿತು ಸಾರ್ವಜನಿಕ ಚರ್ಚೆ ನಡೆಯಬೇಕು’ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದರು.

ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಕೆಲವು ಆಯ್ದ ವನ್ಯಜೀವಿಗಳ ಸಂಖ್ಯೆಯಲ್ಲಿ ಭಾರಿ ಹೆಚ್ಚಳವಾಗುತ್ತಿದ್ದು, ಕಡಿವಾಣದ ಅಗತ್ಯವಿದೆ. ಜತೆಗೆ ವನ್ಯಜೀವಿಗಳ ಸಂರಕ್ಷಣೆಯೂ ಆಗಬೇಕು. ಮಾನವರ ಜೀವಹಾನಿಯೂ ತಪ್ಪಬೇಕು. ಅದಕ್ಕಾಗಿ ಸಂತಾನ ಶಕ್ತಿ ಹರಣ ಅಥವಾ ಚುಚ್ಚುಮದ್ದು ನೀಡುವ ಬಗ್ಗೆ ಚಿಂತನೆ ನಡೆಸಬೇಕು’ ಎಂದರು.

‘ಯಾವ ವನ್ಯಜೀವಿಗಳ ಸಂಖ್ಯೆಯಲ್ಲಿ ಭಾರಿ ಹೆಚ್ಚಳವಾಗುತ್ತದೋ ಆ ಪ್ರದೇಶದಲ್ಲಿ ಒಂದೆರೆಡು ವರ್ಷ ಅವುಗಳ ಸಂತಾನ ನಿಯಂತ್ರಣ ಅಗತ್ಯ. ಬೇರೆ ರಾಜ್ಯಗಳಲ್ಲೂ ಇಂತಹ ಚರ್ಚೆಗಳು ನಡೆಯುತ್ತಿವೆ. ಇದು ನನ್ನ ನಿರ್ಧಾರವಲ್ಲ, ಒಂದು ಚಿಂತನೆ ಮಾತ್ರ. ಇಂತಹ ಒಂದು ಪ್ರಕರಣ ಸುಪ್ರೀಂಕೋರ್ಟ್ನಲ್ಲಿದ್ದು, ಈ ಕುರಿತು ಕಾನೂನು ತಜ್ಞರ ಜತೆ ಚರ್ಚಿಸಿ, ನ್ಯಾಯಾಲಯಕ್ಕೆ ಪ್ರಸ್ತಾವ ಸಲ್ಲಿಸಲು ಸಭೆ ಕರೆಯಲಾಗುವುದು’ ಎಂದರು.

‘ಕಾಡಿನಿಂದ ಹೊರಬರಲು ಇಚ್ಛಿಸುವ ಅರಣ್ಯವಾಸಿಗಳ ಸ್ಥಳಾಂತರದ ಬಗ್ಗೆಯೂ ಸರ್ಕಾರ ಗಂಭೀರ ಚಿಂತನೆ ನಡೆಸಿದೆ. ಪಟ್ಟಿ ಸಿದ್ಧವಾದ ಬಳಿಕ ಹಣ ಮೀಸಲಿಡುವ ಕುರಿತು ಮುಖ್ಯಮಂತ್ರಿ ಜತೆ ಚರ್ಚಿಸಿ, ನಿರ್ಧಾರ ಕೈಗೊಳ್ಳಲಾಗುವುದು. ಅರಣ್ಯವಾಸಿಗಳ ಸ್ಥಳಾಂತರದಿಂದ ವನ್ಯಜೀವಿಗಳ ಆವಾಸಸ್ಥಾನ ವಿಸ್ತರಣೆಯಾಗುತ್ತದೆ. ಮೂಲಸೌಕರ್ಯ ಇರುವ ಸಮಾಜದ ಮುಖ್ಯವಾಹಿನಿಗೆ ಸೇರ್ಪಡೆಯಾಗುತ್ತಾರೆ’ ಎಂದು ಹೇಳಿದರು.

ಆನೆ ಧಾಮಕ್ಕೆ ಸಿಗದ ಅನುಮತಿ

‘ಆನೆಗಳ ದಾಳಿಗೆ ಪರಿಹಾರ ಕಂಡುಕೊಳ್ಳಲು ‘ಆನೆ ಧಾಮ’ ಮಾಡುವ ಬಗ್ಗೆ ಸರ್ಕಾರ ಯೋಜನೆ ರೂಪಿಸಿದೆ. ಆದರೆ ಕೇಂದ್ರದ ಅನುಮತಿ ಸಿಕ್ಕಿಲ್ಲ. ಅನುಮತಿ ಸಿಕ್ಕ ತಕ್ಷಣ ಧಾಮ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುವುದು’ ಎಂದು ಈಶ್ವರ ಖಂಡ್ರೆ ಹೇಳಿದರು. ‘ಕಾಡಾನೆ ದಾಳಿಯಿಂದ ಕಾಫಿ ಬೆಳೆಗಾರರೊಬ್ಬರು ಮೃತಪಟ್ಟಿರುವುದು ನೋವಿನ ಸಂಗತಿ. ಮಾನವ- ಆನೆ ಸಂಘರ್ಷ ತಡೆಯಲು ಸರ್ಕಾರ ಮತ್ತು ಇಲಾಖೆ ಶಕ್ತಿ ಮೀರಿ ಪ್ರಯತ್ನ ಮಾಡುತ್ತಿದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.