ಬೆಳಗಾವಿ: ‘ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮೈಸೂರು–ಕೊಡಗು ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಲು ಟಿಕೆಟ್ ಕೇಳುತ್ತೇನೆ’ ಎಂದು ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ ಹೇಳಿದರು.
ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘40 ವರ್ಷ ಕಾಂಗ್ರೆಸ್
ನಲ್ಲಿದ್ದೆ. ಕಾಂಗ್ರೆಸ್‌ನಿಂದಲೇ ಸಂಸದನಾಗಿದ್ದೆ. ಯಾವುದೋ ಗಳಿಗೆಯಲ್ಲಿ ಪಕ್ಷ ಬಿಟ್ಟಿದ್ದೆ. ಈಗ ಮತ್ತೊಮ್ಮೆ ಏಕೆ ಕಾಂಗ್ರೆಸ್‌ನಿಂದಲೇ ಸ್ಪರ್ಧಿಸಬಾರದು’ ಎಂದು ಪ್ರಶ್ನಿಸಿದರು.
‘ರಾಷ್ಟ್ರದಲ್ಲಿ ಹಾಗೂ ರಾಜ್ಯದಲ್ಲಿ ಈಗ ಪಕ್ಷ ರಾಜಕಾರಣಕ್ಕಿಂತ ವ್ಯಕ್ತಿ ರಾಜಕಾರಣ ನಡೆಯುತ್ತಿದೆ. ಸಿದ್ದರಾಮಯ್ಯ, ಯಡಿಯೂರಪ್ಪ, ಕುಮಾರಸ್ವಾಮಿ, ಎಚ್.ಡಿ.ದೇವೇಗೌಡ ಕೇಂದ್ರಿತ ರಾಜಕಾರಣ ನಡೆಯುತ್ತಿದೆ. ಇದರಿಂದ ಆಂತರಿಕ ಪ್ರಜಾಪ್ರಭುತ್ವ ಸತ್ತುಹೋಗಿದೆ’ ಎಂದೂ ಹೇಳಿದರು.
‘ರಾಜಕಾರಣ ಜಡವಲ್ಲ ಅದು ಜಂಗಮ. ಏನೇನು ಬದಲಾಗುತ್ತದೆಯೋ ನೋಡೋಣ’ ಎಂದು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.