‘ನಾನು ಮತ್ತೆ ಚುನಾವಣೆಗೆ ನಿಲ್ಲುವುದಿಲ್ಲ. ಆದರೆ, ಕೊನೆಯವರೆಗೂ ರಾಜಕಾರಣದಲ್ಲಿ ಕ್ರಿಯಾಶೀಲವಾಗಿಯೇ ಇರುತ್ತೇನೆ. ಬಡವರ ಪರ ರಾಜಕಾರಣ, ಹೋರಾಟ ಮುಂದುವರಿಸುತ್ತೇನೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಭಾನುವಾರ ಹೇಳಿದರು. ಬೆಂಗಳೂರು ದಕ್ಷಿಣ ತಾಲ್ಲೂಕಿನ ಕೇತೋಹಳ್ಳಿಯ ಕಾಗಿನೆಲೆ ಮಹಾಸಂಸ್ಥಾನದ ಕನಕ ಗುರುಪೀಠದಲ್ಲಿ ಭಾನುವಾರ ಆಯೋಜಿಸಿದ್ದ ಕುರುಬ ಸಮಾಜದ ನೂತನ ಸಚಿವರು, ಶಾಸಕರಿಗೆ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು, ‘ಸರ್ಕಾರವು ಜಾತಿಗಣತಿ ವರದಿಯನ್ನು ಸ್ವೀಕರಿಸಲಿದೆ. ಜಾತಿಗಣತಿ ವರದಿಯನ್ನು ಸ್ವೀಕರಿಸುವುದು ಬೇಡ ಎಂದು ಸಮ್ಮಿಶ್ರ ಸರ್ಕಾರದಲ್ಲಿ ಹಿಂದುಳಿದ ವರ್ಗಗಳ ಖಾತೆ ಸಚಿವರಾಗಿದ್ದ ಪುಟ್ಟರಂಗಶೆಟ್ಟಿ ಅವರಿಗೆ ಎಚ್.ಡಿ.ಕುಮಾರಸ್ವಾಮಿ ಅವರೇ ಹೇಳಿದ್ದರು. ಆದರೆ, ನಮ್ಮ ಸರ್ಕಾರ ಆ ವರದಿ ಸ್ವೀಕರಿಸಲಿದೆ’ ಎಂದು ಸಿದ್ದರಾಮಯ್ಯ ಹೇಳಿದರು.
ಯೂಟ್ಯೂಬ್ ಚಂದಾದಾರರಾಗಿ: / prajavani ತಾಜಾ ಸುದ್ದಿಗಳಿಗಾಗಿ: Prajavani.net ನೋಡಿ ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ: Facebook.com/Prajavani.net ಟ್ವಿಟರ್‌ನಲ್ಲಿ ಫಾಲೋ ಮಾಡಿ: Twitter.com/Prajavani ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ: https://t.me/Prajavani1947
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.