ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿ.ಎಂ. ಜೊತೆ ಸಮಾಲೋಚಿಸಿ ಕ್ರಮ: ಸಚಿವ ನಾಗೇಶ್‌ ಭರವಸೆ

ವೃತ್ತಿ ಶಿಕ್ಷಣ ಶಿಕ್ಷಕರ ಕಾಯಂ ಪೂರ್ವ ಸೇವೆ ಪರಿಗಣನೆ
Last Updated 15 ಫೆಬ್ರುವರಿ 2022, 19:12 IST
ಅಕ್ಷರ ಗಾತ್ರ

ಬೆಂಗಳೂರು: ಬೇರೆ ಬೇರೆ ಇಲಾಖೆಗಳಲ್ಲಿ ವಿಲೀನಗೊಂಡಿರುವ ವೃತ್ತಿ ಶಿಕ್ಷಣ ಇಲಾಖೆಯ ನೌಕರರ ಕಾಯಂ ಪೂರ್ವ ಸೇವೆಯನ್ನು ಪರಿಗಣಿಸುವ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಹಣಕಾಸು ಇಲಾಖೆ ಜೊತೆ ಸಮಾಲೋಚಿಸಿ ಕ್ರಮ ಕೈಗೊಳ್ಳುವುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ವಿಧಾನ ಪರಿಷತ್ತಿನಲ್ಲಿ ಮಂಗಳವಾರ ಭರವಸೆ ನೀಡಿದರು.

‘ವೃತ್ತಿ ಶಿಕ್ಷಣ ಇಲಾಖೆಯಲ್ಲಿ 10ಕ್ಕೂ ಹೆಚ್ಚು ವರ್ಷಗಳು ಸೇವೆ ಸಲ್ಲಿಸಿರುವ ಶಿಕ್ಷಕರನ್ನು ನ್ಯಾಯಾಲಯದ ಆದೇಶದ ಮೇರೆಗೆ ಕಾಯಂಗೊಳಿಸಲಾಗಿತ್ತು. ವೃತ್ತಿ ಆಧಾರಿತ ಕೋರ್ಸ್‌ಗಳಲ್ಲಿ 5 ವರ್ಷಗಳು ಸೇವೆ ಸಲ್ಲಿಸಿದ್ದ ಅರೆಕಾಲಿಕ ನೌಕರರನ್ನು 2011ರಲ್ಲಿ ವಿಶೇಷ ಕಾಯ್ದೆ ಜಾರಿಗೊಳಿಸುವ ಮೂಲಕ ಕಾಯಂಗೊಳಿಸಲಾಯಿತು. ಅವರ ಒಟ್ಟು ಸೇವಾವಧಿ, ಜ್ಯೇಷ್ಠತೆ, ರಜೆ, ಪಿಂಚಣಿಗೆ ಸಂಬಂಧಿಸಿದ ಅಂಶಗಳನ್ನು ಈ ಕಾಯ್ದೆಯಲ್ಲಿ ಪರಿಗಣಿಸಿರಲಿಲ್ಲ. ಹಾಗಾಗಿ ಅವರು ಈಗ ಪಿಂಚಣಿಯಿಂದ ವಂಚಿತರಾಗಿದ್ದಾರೆ’ ಎಂದು ಸದಸ್ಯ ಕೆ.ಟಿ.ಶ್ರೀಕಂಠೇಗೌಡ ತಿಳಿಸಿದರು.

‘ವೃತ್ತಿ ಆಧಾರಿತ ಕೋರ್ಸುಗಳ ಅರೆಕಾಲಿಕ ನೌಕರರ ಸೇವೆಯ ವಿಲೀನವು ಒಂದು ಸಲದ ಕ್ರಮದ ರೂ‍ಪದಲ್ಲಿ ಜಾರಿಯಾಗಿತ್ತು. ಈ ಸಲುವಾಗಿ ಜಾರಿಗೊಳಿಸಿದ ವಿಶೇಷ ಕಾಯ್ದೆಯನ್ನು ತಿದ್ದುಪಡಿ ಮಾಡುವಂತಿಲ್ಲ ಎಂದು ಸುಪ್ರೀಂ ಕೋರ್ಟ್‌ ನಿರ್ದೇಶನ ನೀಡಿದೆ. ಹಾಗಾಗಿ ಈ ನೌಕರರಿಗೆ ಪಿಂಚಣಿ ನೀಡುವ ಉದ್ದೇಶದಿಂದ ಹಿಂದಿನ ಅರ್ಹತೆಯನ್ನು ಪರಿಗಣಿಸಲು ಅವಕಾಶವಿಲ್ಲ’ ಎಂದು ಸಚಿವ ನಾಗೇಶ್‌ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT