‘ಬಜೆಟ್ ಪ್ರತಿಯಲ್ಲಿ ಮೇಕೆದಾಟು, ಎತ್ತಿನಹೊಳೆ ಯೋಜನೆಗಳಿಗೆ ಹಣ ಇಟ್ಟಿಲ್ಲ ಎಂಬ ನಿಮ್ಮ ಆರೋಪದಲ್ಲಿ ಹುರುಳಿಲ್ಲ. ನೀರಾವರಿಗಾಗಿ ಒಟ್ಟು ₹22,854 ಕೋಟಿ ಇಟ್ಟಿದ್ದು, ಇಲಾಖೆಯ ಕ್ರಿಯಾ ಯೋಜನೆ ರೂಪಿಸುವಾಗ ಇವೆರಡೂ ಯೋಜನೆಗಳಿಗೂ ಹಣ ಇಡುತ್ತೇವೆ’ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ತಿಳಿಸಿದರು.

‘ಮೇಕೆದಾಟು ಮತ್ತು ಎತ್ತಿನಹೊಳೆ ಯೋಜನೆಗಳಿಗೆ ಹಣವಿಟ್ಟಿಲ್ಲ’ ಎಂಬ ಸಿದ್ದರಾಮಯ್ಯ ಅವರ ಟೀಕೆಗೆ ಪ್ರತಿಕ್ರಿಯಿಸಿದ ಸಚಿವರು, ‘ಯಾವ ಯೋಜನೆಗಳಿಗೆ ಎಷ್ಟು ಹಣ ಇಟ್ಟಿದ್ದೇವೆ ಎಂಬುದನ್ನು ಬಜೆಟ್ನಲ್ಲಿ ಪ್ರಸ್ತಾಪಿಸಲು ಸಾಧ್ಯವಾಗುವುದಿಲ್ಲ. ಇಲಾಖಾ ಯೋಜನೆ ರೂಪಿಸುವಾಗ ಸೇರಿಸುತ್ತೇವೆ’ ಎಂದರು.

‘ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರಿಯ ಯೋಜನೆ ಎಂದು ಕೇಂದ್ರ ಘೋಷಿಸಿದ್ದರೂ, ಅದರ ಬಗ್ಗೆ ಯಾವುದೇ ಆದೇಶ ಹೊರಡಿಸಿಲ್ಲ’ ಎಂದು ಸಿದ್ದರಾಮಯ್ಯ ಟೀಕಿಸಿದರು. ‘ಕೇಂದ್ರ ಸರ್ಕಾರ ಘೋಷಣೆ ಮಾಡಿರುವುದು ಮಾತ್ರವಲ್ಲದೇ ಆದೇಶವನ್ನೂ ಹೊರಡಿಸಿದೆ. ಆದೇಶ ಪ್ರತಿ ಈಗ ನನ್ನ ಬಳಿ ಇಲ್ಲ. ಸರ್ಕಾರದ ಉತ್ತರ ನೀಡುವ ಸಂದರ್ಭದಲ್ಲಿ ಕೊಡುತ್ತೇನೆ’ ಎಂದು ಕಾರಜೋಳ ಪ್ರತಿಕ್ರಿಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.