ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಧಾನ ಪರಿಷತ್ ಉಪ ಚುನಾವಣೆ:ಮೈತ್ರಿಕೂಟ ಅಭ್ಯರ್ಥಿ ಸುನೀಲಗೌಡ ಬಿ.ಪಾಟೀಲಗೆ ಗೆಲುವು

ಕಾಂಗ್ರೆಸ್–ಜೆಡಿಎಸ್ ಮೈತ್ರಿ
Last Updated 11 ಸೆಪ್ಟೆಂಬರ್ 2018, 15:57 IST
ಅಕ್ಷರ ಗಾತ್ರ

ವಿಜಯಪುರ:ವಿಜಯಪುರ, ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳಿಂದ ಬಿಜಾಪುರ ದ್ವಿಸದಸ್ಯ ವಿಧಾನ ಪರಿಷತ್‌ನ ತೆರವಾದ ಒಂದು ಕ್ಷೇತ್ರಕ್ಕೆ ನಡೆದಿದ್ದ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌–ಜೆಡಿಎಸ್‌ ಮೈತ್ರಿಕೂಟದ ಅಭ್ಯರ್ಥಿ ಸುನೀಲಗೌಡ ಬಿ.ಪಾಟೀಲ 2040 ಮತಗಳ ಅಂತರದಿಂದ ಗೆಲುವು ಸಾಧಿಸಿದರು.

ನಗರದಲ್ಲಿ ಮಂಗಳವಾರ ಮತ ಎಣಿಕೆ ನಡೆಯಿತು. ಚಲಾವಣೆಯಾಗಿದ್ದ 8111 ಮತಗಳಲ್ಲಿ ಸುನೀಲಗೌಡ ಬಿ.ಪಾಟೀಲ 4819 ಮತಗಳನ್ನು ಪಡೆದರೆ, ಸಮೀಪದ ಪ್ರತಿಸ್ಪರ್ಧಿ ಬಿಜೆಪಿ ಅಭ್ಯರ್ಥಿ ಗೂಳಪ್ಪ ಶಟಗಾರ 2779 ಮತ ಪಡೆದರು.

ಕಣದಲ್ಲಿ ಒಟ್ಟು ಏಳು ಅಭ್ಯರ್ಥಿಗಳಿದ್ದು, ಪಕ್ಷೇತರ ಅಭ್ಯರ್ಥಿಗಳಾದ ಕಾಂತಪ್ಪ ಇಂಚಗೇರಿ 19, ದುರ್ಗಪ್ಪ ಸಿದ್ದಾಪುರ 12, ಮಲ್ಲಿಕಾರ್ಜುನ ಕೆಂಗನಾಳ 4, ಜಮೀನ್ದಾರ್ ಮಾರುತಿ ಹನಮಪ್ಪ 11, ಶರಣಪ್ಪ ಕನ್ನೊಳ್ಳಿ 13 ಮತ ಪಡೆದರೆ, 454 ಮತಗಳು ತಿರಸ್ಕೃತಗೊಂಡಿವೆ.

ವಿಜಯಪುರ ಜಿಲ್ಲೆಯ ಇತಿಹಾಸದಲ್ಲೇ ಮೊದಲ ಬಾರಿಗೆ ಸಹೋದರರಿಬ್ಬರು ಒಮ್ಮೆಗೆ ವಿಧಾನಸಭೆ, ವಿಧಾನ ಪರಿಷತ್‌ ಪ್ರವೇಶಿಸುತ್ತಿರುವುದು ಇದೇ ಪ್ರಥಮ. ವಿಧಾನ ಪರಿಷತ್‌ ಸದಸ್ಯರಾಗಿ ಆಯ್ಕೆಯಾದ ಸುನೀಲಗೌಡ ಬಿ.ಪಾಟೀಲ, ಕಾಂಗ್ರೆಸ್‌ನ ಪ್ರಭಾವಿ ಮುಖಂಡ, ಬಬಲೇಶ್ವರ ಕ್ಷೇತ್ರದ ಶಾಸಕ ಎಂ.ಬಿ.ಪಾಟೀಲ ಸಹೋದರ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT