ಬೆಂಗಳೂರು: ‘ಮತಾಂತರ ಮಾಡುತ್ತಿದ್ದಾರೆ ಎಂದು ಕ್ರೈಸ್ತ ಧರ್ಮೀಯರ ವಿರುದ್ಧ ದಾಖಲಿಸಿರುವ ಸುಳ್ಳು ಪ್ರಕರಣಗಳನ್ನು ಹಿಂಪಡೆಯಬೇಕು’ ಎಂದು ‘ಅಹಿಂದ ಚಳವಳಿ’ ಸಂಘಟನೆಯ ಮುಖ್ಯ ಸಂಚಾಲಕ ಸಿದ್ದಯ್ಯ ಮೂರ್ತಿ ಒತ್ತಾಯಿಸಿದ್ದಾರೆ.

ಅಹಿಂದ ಚಳವಳಿ ವತಿಯಿಂದ ಗಾಂಧಿ ಭವನದಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ಕ್ರೈಸ್ತ ಧರ್ಮಗುರುಗಳ ಸಭೆಯ ನಿರ್ಣಯಗಳ ಬಗ್ಗೆ ಪ್ರಕಟಣೆ ನೀಡಿರುವ ಅವರು, ‘ಪೊಲೀಸ್ ತನಿಖೆಯ ಹಂತದಲ್ಲಿರುವ ಪ್ರಕರಣಗಳನ್ನು ಸರ್ಕಾರ ವಾಪಸ್ ಪಡೆಯಬೇಕು. ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿರುವ ಪ್ರಕರಣಗಳಲ್ಲಿ ಸಂಘದ ವತಿಯಿಂದ ಹೋರಾಟ ನಡೆಸಲು ತೀರ್ಮಾನಿಸಲಾಯಿತು’ ಎಂದಿದ್ದಾರೆ.

‘2022ರಲ್ಲಿ ಅಂದಿನ ರಾಜ್ಯ ಸರ್ಕಾರವು ಜಾರಿಗೆ ತಂದ ‘ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕಿನ ರಕ್ಷಣಾ ಕಾಯ್ದೆ’ಯಿಂದ ಕ್ರೈಸ್ತ ಧರ್ಮೀಯರಿಗೆ ತೊಂದರೆಯಾಗುತ್ತಿದೆ. ಆ ಕಾಯ್ದೆಯನ್ನು ವಾಪಸ್ ಪಡೆಯಬೇಕು. ಚರ್ಚ್ ಮತ್ತು ಮಸಣ ಸಂಬಂಧಿ ಕಾಮಗಾರಿಗಳಿಗೆ ಕೆಲ ಸಂಘಟನೆಗಳು ಅಡಚಣೆ ಮಾಡುತ್ತಿದ್ದು, ಈ ವಿಷಯದಲ್ಲಿ ಸರ್ಕಾರ ಮಧ್ಯಪ್ರವೇಶಿಸಬೇಕು’ ಎಂದು ಆಗ್ರಹಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.