ಶನಿವಾರ, 5 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಮಹಿಳಾ ಕಾಂಗ್ರೆಸ್ ಸದಸ್ಯತ್ವ ನೋಂದಣಿ ನಾಳೆಯಿಂದ: ಸೌಮ್ಯಾ ರೆಡ್ಡಿ

Published : 14 ಸೆಪ್ಟೆಂಬರ್ 2024, 15:49 IST
Last Updated : 14 ಸೆಪ್ಟೆಂಬರ್ 2024, 15:49 IST
ಫಾಲೋ ಮಾಡಿ
Comments

ಬೆಂಗಳೂರು: ‘ಮಹಿಳಾ ಕಾಂಗ್ರೆಸ್ ಸ್ಥಾಪನೆಯಾಗಿ ಭಾನುವಾರಕ್ಕೆ (ಸೆ. 15) 40 ವರ್ಷ ಪೂರ್ಣಗೊಳ್ಳುತ್ತಿದ್ದು, ಈ ಹಿನ್ನೆಲೆಯಲ್ಲಿ ಮಹಿಳಾ ಕಾಂಗ್ರೆಸ್ ಸದಸ್ಯತ್ವ ನೋಂದಣಿ ಅಭಿಯಾನ ಹಮ್ಮಿಕೊಳ್ಳಲಾಗಿದೆ’ ಎಂದು ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಸೌಮ್ಯಾ ರೆಡ್ಡಿ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಜಿಲ್ಲೆ, ಬ್ಲಾಕ್ ಹಾಗೂ ಹಳ್ಳಿಗಳ ಮಟ್ಟದಲ್ಲಿ ಈ ಅಭಿಯಾನ ಕೈಗೊಳ್ಳಲು ತೀರ್ಮಾನಿಸಿದ್ದೇವೆ’ ಎಂದರು.

ರಾಷ್ಟ್ರೀಯ ಮಹಿಳಾ ಕಾಂಗ್ರೆಸ್ ವೀಕ್ಷಕಿ ಶಿಲ್ಪಿ ಅರೋರಾ ಮಾತನಾಡಿ, ‘ದೇಶದೆಲ್ಲೆಡೆ ಮೊದಲ ಬಾರಿ ಮಹಿಳಾ ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ಬೆಳಿಗ್ಗೆ 11 ಗಂಟೆಗೆ ಚಾಲನೆ ನೀಡಲಾಗುವುದು. ಈ ವೇಳೆ ಸದಸ್ಯತ್ವ ನೋಂದಣಿ ಜಾಲತಾಣ ಅನಾವರಣ ಮಾಡಲಾಗುವುದು.  ಸದಸ್ಯತ್ವ ಪಡೆಯಲು ₹ 100 ಶುಲ್ಕ ನೀಡಬೇಕು. ಐದು ವರ್ಷಗಳ ಕಾಲ ಈ ಸದಸ್ಯತ್ವ ಜಾರಿಯಲ್ಲಿ ಇರಲಿದೆ’ ಎಂದರು.

‘ಹತ್ತು ವರ್ಷಗಳ ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಹೆಚ್ಚಾಗಿವೆ. ಮಹಿಳೆಯರಿಗೆ ಸಿಗಬೇಕಾದ ಹಕ್ಕು, ಸ್ಥಾನಮಾನ, ರಕ್ಷಣೆ ಸಿಗುತ್ತಿಲ್ಲ. ರಾಜಕೀಯವಾಗಿ ಮಹಿಳೆಯರಿಗೆ ಶೇ 33 ಮೀಸಲಾತಿ ನೀಡುವ ಮಸೂದೆ ಬಗ್ಗೆ ಚರ್ಚೆ ಆರಂಭವಾಗಿ 30 ವರ್ಷಗಳೇ ಕಳೆದಿವೆ. ಚುನಾವಣೆ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಈ ಮಸೂದೆ ಮಂಡನೆ ಮಾಡಿಸಿತ್ತು. ಆದಷ್ಟು ಬೇಗ ಈ ಮೀಸಲಾತಿ ಜಾರಿಗೆ ಬರಬೇಕಿದೆ. ನಾರಿ ನ್ಯಾಯಕ್ಕಾಗಿ ಮಹಿಳೆಯರು ಕಾಂಗ್ರೆಸ್ ಜತೆ ಕೈಜೋಡಿಸಬೇಕು’ ಎಂದು ಮನವಿ ಮಾಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT