ಬೆಂಗಳೂರು: ಮದ್ಯದಂಗಡಿಗಳಿಗೆ ಅನುಮತಿ ನೀಡುವ ಅಧಿಕಾರವನ್ನು ಗ್ರಾಮಸಭೆಗಳಿಗೆ ನೀಡಬೇಕು ಎಂಬುದೂ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಇದೇ 25ರಂದು ಸ್ವಾತಂತ್ರ್ಯ ಉದ್ಯಾನದಲ್ಲಿ ಎಂಟು ಸಾವಿರ ಮಹಿಳೆಯರು ಧರಣಿ ಸತ್ಯಾಗ್ರಹ ನಡೆಸಲಿದ್ದಾರೆ.

ಮದ್ಯ ನಿಷೇಧ ಆಂದೋಲನ ಈ ಹೋರಾಟ ನಡೆಸುತ್ತಿದ್ದು, ಹರಿಯಾಣ, ರಾಜಸ್ಥಾನ, ಮಹಾರಾಷ್ಟ್ರ ರಾಜ್ಯಗಳ ಮಾದರಿಯಲ್ಲಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಮದ್ಯದಂಗಡಿಗಳಿಗೆ ಅನುಮತಿ ನೀಡುವ ಅಧಿಕಾರವನ್ನು ಗ್ರಾಮಸಭೆಗಳಿಗೆ ನೀಡುವ ಕಾನೂನನ್ನು ರೂಪಿಸಬೇಕು. ಅಕ್ರಮ ಮದ್ಯ ಮಾರಾಟ ನಿಲ್ಲಿಸಬೇಕು. ಪ್ರತಿ ಗ್ರಾಮದಲ್ಲಿ ಮಹಿಳೆಯರನ್ನು ಒಳಗೊಂಡ ಜಾಗ್ರತಿ ಸಮಿತಿಗಳನ್ನು ರಚಿಸಿ, ಅರೆ ನ್ಯಾಯಿಕ ಅಧಿಕಾರ ನೀಡಬೇಕು. ಹೊಸದಾಗಿ ಪರವಾನಗಿ ನೀಡಬಾರದು. ಆನ್ಲೈನ್ನಲ್ಲಿ ಮದ್ಯ ಮಾರಾಟ ಮಾಡಲು ಅವಕಾಶ ನೀಡಬಾರದು ಎಂದು ಸರ್ಕಾರವನ್ನು ಒತ್ತಾಯಿಸಲಾಗುವುದು ಎಂದು ಸಂಘಟನೆಯ ಸಂಚಾಲಕಿ ಸ್ವರ್ಣಾ ಭಟ್ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.