ಭಾರತೀನಗರ: ಕೇಂದ್ರ ಸರ್ಕಾರ ಜಾರಿಗೆ ತರಲು ಹೊರಟಿರುವ ಮಹಿಳಾ ಮೀಸಲಾತಿಗೆ ಕಾಂಗ್ರೆಸ್ ಪಕ್ಷವು ಯಾವುದೇ ವಿರೋಧ ವ್ಯಕ್ತಪಡಿಸಿಲ್ಲ, ಬದಲಾಗಿ ಬೆಂಬಲ ಸೂಚಿಸಿದೆ ಎಂದು ಶಾಸಕ ಕೆ.ಎಂ.ಉದಯ್ ತಿಳಿಸಿದರು. ಸಮೀಪದ ಎಸ್.ಐ.ಹಾಗಲಹಳ್ಳಿ ಗೇಟ್ ಬಳಿ ಹೆಬ್ಬಾಳ ಚನ್ನಯ್ಯ ನಾಲೆ ಆಧುನೀಕರಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.

ಮಹಿಳಾ ಮೀಸಲಾತಿ ನೆಪದಲ್ಲಿ ಕೇಂದ್ರ ಸರ್ಕಾರ ವಂಚನೆ ಮಾಡಲು ಹೊರಟಿತ್ತು. ಆ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷವು ಅದನ್ನು ವಿರೋಧಿಸಿದೆಯೇ ಹೊರತು ಸಂಪೂರ್ಣ ಮಹಿಳಾ ಮೀಸಲಾತಿ ಬೇಡವೆಂದು ಎಲ್ಲಿಯೂ ಹೇಳಿರಲಿಲ್ಲ. ಆ ನಂತರದ ಬೆಳವಣಿಗೆಗಳಲ್ಲಿ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕರಾದ ಸೋನಿಯಾಗಾಂಧಿ, ರಾಹುಲ್ ಗಾಂಧಿ ಸೇರಿದಂತೆ ಇಂಡಿಯಾ ಒಕ್ಕೂಟದ ಎಲ್ಲಾ ನಾಯಕರು ಮಹಿಳಾ ಮೀಸಲಾತಿಗೆ ಬೆಂಬಲ ಸೂಚಿಸಿದ್ದಾರೆ ಎಂದು ಸ್ಪಷ್ಟಪಡಿಸಿದರು.

ಕಾಂಗ್ರೆಸ್ ಪಕ್ಷದಿಂದ ಜೆಡಿಎಸ್ ಪಕ್ಷಕ್ಕೆ ಯಾವುದೇ ಶಾಸಕರಾಗಲಿ ಮುಖಂಡರಾಗಲಿ ಪಕ್ಷಾಂತರ ಮಾಡುವುದಿಲ್ಲ, ಬದಲಾಗಿ ಜೆಡಿಎಸ್ನ ಕೆಲವು ನಾಯಕರು ಕಾಂಗ್ರೆಸ್ ಪಕ್ಷಕ್ಕೆ ಶೀಘ್ರವೇ ಸೇರ್ಪಡೆ ಆಗಲಿದ್ದಾರೆ. ಸಚಿವರಾದ ಜಮೀರ್ ಖಾನ್ ಅವರು ಜೆಡಿಎಸ್ ಪಕ್ಷಕ್ಕೆ ಹೋಗುವುದಿಲ್ಲ. ನಮ್ಮ ಪಕ್ಷದಿಂದ ಒಂದು ನೊಣ ಸಹ ಕೂಡ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಳ್ಳುವುದಿಲ್ಲ ಎಂದು ತಿಳಿಸಿದರು.

ಹೆಬ್ಬಾಳ್ಳ ಚನ್ನಯ್ಯ ನಾಲೆಯಿಂದ ಹೊರಡುವ ಸೀಳುನಾಲೆ, ಅಭಿವೃದ್ಧಿ ಮಾಡುವಂತೆ ಒತ್ತಾಯಿಸಿದ ಮೇರೆಗೆ ₹ 2.25 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಮಾಡಲು ಮುಂದಾಗಿದ್ದೇವೆ. ರೈತರಿಗೆ ಮುಂದಿನ ದಿನಗಳಲ್ಲಿ ಸಾಕಷ್ಟು ಉಪಯೋಗ ಆಗಲಿದೆ ಎಂದು ತಿಳಿಸಿದರು.

ಮದ್ದೂರಮ್ಮನ ಜಾತ್ರಾ ಮಹೋತ್ಸವದ ಅಂಗವಾಗಿ ಹಮ್ಮಿಕೊಳ್ಳಲು ಉದ್ದೇಶಿಸಿರುವ ಮ್ಯಾರಥಾನ್ನಲ್ಲಿ 5 ಸಾವಿರ ಮಂದಿ ಪಾಲ್ಗೊಳ್ಳುವ ನಿರೀಕ್ಷೆ ಇದೆ. ಎಲ್ಲರಿಗೂ ಊಟದ ವ್ಯವಸ್ಥೆ ಕಲ್ಪಿಸಲಾಗುವುದು ಎಂದರು.

ಜಿ.ಪಂ ಮಾಜಿ ಸದಸ್ಯ ಎ.ಎಸ್.ರಾಜೀವ್, ಸೊಸೈಟಿ ಅಧ್ಯಕ್ಷ ಮಹೇಶ್, ಅಣ್ಣೇಸ್ವಾಮಿ, ಇಂದ್ರಕುಮಾರ್, ಮಹೇಂದ, ನಂಜುಂಡ, ಎಸ್.ಐ.ಹೊನ್ನಲಗೆರೆ ಕೆಂಪೇಗೌಡ, ಗುತ್ತಿಗೆದಾರ ಆಕಾಶ್, ಹಾಗಲಹಳ್ಳಿ ವಿಶ್ವ, ಕಾವೇರಿ ನೀರಾವರಿ ನಿಗಮದ ಎಇಇ ಪ್ರಶಾಂತ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260424-40-1055678257

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.