ಪ್ರಕರಣ ತಡೆ ವಿಚಾರಣೆಗೆ ಸಮಿತಿ
ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ ತಡೆಯಲು ಪ್ರಕರಣಗಳ ಪ್ರಾಥಮಿಕ ವಿಚಾರಣೆ ನಡೆಸಲು ಪ್ರತಿ ಕಾಲೇಜಿನಲ್ಲೂ ಸಂಸ್ಥೆಯ ಮುಖ್ಯಸ್ಥರು ಮಹಿಳಾ ವಸತಿನಿಲಯದ ಮೇಲ್ವಿಚಾರಕಿಯರು ನಿಯೋಜಿತ ಅಧಿಕಾರಿಗಳನ್ನು ಒಳಗೊಂಡ ಸಮಿತಿ ರಚಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ಈ ಸಮಿತಿಯು ಕ್ಯಾಂಪಸ್ ಸುರಕ್ಷತಾ ಕ್ರಮಗಳ ಕುರಿತು ನಿಯಮಿತವಾಗಿ ಮೇಲ್ವಿಚಾರಣೆ ನಡೆಸಬೇಕು. ಪ್ರತಿ ಮೂರು ತಿಂಗಳಿಗೆ ಒಮ್ಮೆ ಸಭೆ ನಡೆಸಿ ಪರಾಮರ್ಶೆ ನಡೆಸಬೇಕು. ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯಕ್ಕೆ ಸಮಗ್ರ ವರದಿ ಸಲ್ಲಿಸಬೇಕು ಎಂದು ಸೂಚಿಸಲಾಗಿದೆ.