‘ಬಾಲಕರನ್ನು ತಂಬಾಕು ಹಾವಳಿಯಿಂದ ರಕ್ಷಿಸಲು ‘ತಂಬಾಕು ಮುಕ್ತ ಜನಾಂಗ-2030’ ಎಂಬ ಹೊಸ ನೀತಿಯನ್ನು ಪರಿಚಯಿಸುವ ಪ್ರಕ್ರಿಯೆ ನಡೆಯುತ್ತಿದೆ. ಕೋಟ್ಪಾ ಕಾಯ್ದೆ 2003ಕ್ಕೆ ತಿದ್ದುಪಡಿ ತರುವ ಪ್ರಸ್ತಾವ ಸರ್ಕಾರದ ಹಂತದಲ್ಲಿದೆ. ನಗರಾಭಿವೃದ್ಧಿ ಇಲಾಖೆ 2022ರಲ್ಲಿ ಹೊರಡಿಸಿರುವ ಅಧಿಸೂಚನೆ ಪ್ರಕಾರ ತಂಬಾಕು ಉತ್ಪನ್ನಗಳ ಮಾರಾಟಕ್ಕೆ ಪ್ರತ್ಯೇಕ ಪರವಾನಗಿ ಕಡ್ಡಾಯ. ತಂಬಾಕು ಉತ್ಪನ್ನಗಳ ಕಾನೂನುಬಾಹಿರ ಮಾರಾಟ ಮತ್ತು ಬಳಕೆಗೆ ಕಡಿವಾಣ ಹಾಕಲು ಆರೋಗ್ಯ ಇಲಾಖೆ ಪ್ರತ್ಯೇಕ ಮೊಬೈಲ್ ಆ್ಯಪ್ ಪರಿಚಯಿಸಿದೆ’ ಎಂದು ರಾಜ್ಯ ತಂಬಾಕು ನಿಯಂತ್ರಣ ಘಟಕ ಹೇಳಿದೆ.