ಮರಿಯಮ್ಮನಹಳ್ಳಿ (ವಿಜಯನಗರ ಜಿಲ್ಲೆ): ಸಾರ್ವಜನಿಕ ಶಿಕ್ಷಣ ಇಲಾಖೆಯ ವತಿಯಿಂದ ಇಲ್ಲಿ ಶನಿವಾರ ನಡೆದ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ 14 ಮತ್ತು 17ವರ್ಷ ವಯೋಮಿತಿಯ ಬಾಲಕರ ಮತ್ತು ಬಾಲಕಿಯರ ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿಯಲ್ಲಿ ಬಾಲಕರ ಸಮಗ್ರ ಪ್ರಶಸ್ತಿಯನ್ನು ದಾವಣಗೆರೆ ಹಾಗೂ ಬಾಲಕಿಯರ ಸಮಗ್ರ ಪ್ರಶಸ್ತಿಯನ್ನು ಉತ್ತರ ಕನ್ನಡ ಜಿಲ್ಲೆ ತನ್ನದಾಗಿಸಿಕೊಂಡಿದೆ.

ದಾವಣಗೆರೆ ಜಿಲ್ಲೆಯ 19 ಮಂದಿ ವಿವಿಧ ವಿಭಾಗಗಳಲ್ಲಿ ಪದಕಗಳನ್ನು ಪಡೆದರೆ, ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದ 15 ಬಾಲಕಿಯರು ವಿವಿಧ ಪದಕಗಳನ್ನು ಗಳಿಸಿಕೊಂಡರು.

ರಾಜ್ಯದ 35 ಶೈಕ್ಷಣಿಕ ಜಿಲ್ಲೆಗಳಿಂದ 259 ಬಾಲಕಿಯರು, 433 ಬಾಲಕರು ಸಹಿತ ಒಟ್ಟು 692 ಮಂದಿ ಸ್ಪರ್ಧಿಗಳು ಪಾಲ್ಗೊಂಡಿದ್ದರು. ಇಲ್ಲಿ ಚಿನ್ನದ ಪದಕ ಪಡೆದವರು 50 ಮಂದಿ ಉತ್ತರ ಪ್ರದೇಶದ ಗೋರಖ್ಪುರದಲ್ಲಿ ಮುಂದಿನ ತಿಂಗಳು ನಡೆಯುವ ರಾಷ್ಟ್ರ ಮಟ್ಟದ ಕುಸ್ತಿ ಪಂದ್ಯಾವಳಿಯಲ್ಲಿ ಪಾಲ್ಗೊಳ್ಳುವ ಅರ್ಹತೆ ಗಳಿಸಿದ್ದಾರೆ.

ಬಂಗಾರ, ಬೆಳ್ಳಿ ಹಾಗೂ ಎರಡು ಕಂಚಿನ ಪದಕಗಳನ್ನು ಪಡೆದ ಎಲ್ಲಾ ಕುಸ್ತಿಪಟುಗಳಿಗೆ ಶಾಸಕ ಕೆ.ನೇಮರಾಜನಾಯ್ಕ ಇತರರು ಭಾನುವಾರ ರಾತ್ರಿ ನಡೆದ ಸಮಾರೋಪ ಸಮಾರಂಭದಲ್ಲಿ ಪದಕ ವಿತರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.