ಮೈಸೂರು: ರಾಜಕೀಯ ಹಾಗೂ ಸಾಮಾಜಿಕ ಚಿಂತಕ, ಲೇಖಕ ಪ್ರೊ.ಮುಜಾಫರ್ ಅಸ್ಸಾದಿ (63) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಶನಿವಾರ ಮುಂಜಾನೆ ಬಹು ಅಂಗಾಂಗ ವೈಫಲ್ಯದಿಂದ ನಿಧನರಾದರು. ಶುಕ್ರವಾರವಷ್ಟೇ ತೆರೆದ ಹೃದಯ ಶಸ್ತ್ರಚಿಕಿತ್ಸೆ ನಡೆದಿತ್ತು. ಅವರಿಗೆ ಪತ್ನಿ, ತಾಯಿ, ಪುತ್ರ, ಪುತ್ರಿ ಇದ್ದಾರೆ.

ಸರಸ್ವತಿಪುರಂನ ನಿವಾಸ ಹಾಗೂ ನ್ಯೂ ಮುಸ್ಲಿಂ ಹಾಸ್ಟೆಲ್ನಲ್ಲಿ ವಿದ್ಯಾರ್ಥಿಗಳು, ಲೇಖಕರು, ವಿವಿಧ ಸಂಘಟನೆಗಳ ಹೋರಾಟಗಾರರು ಹಾಗೂ ಜನಪ್ರತಿನಿಧಿಗಳು ಅಂತಿಮ ದರ್ಶನ ಪಡೆದರು. ಬನ್ನಿಮಂಟಪದ ಎಲ್ಐಸಿ ವೃತ್ತದ ಬಳಿಯಿರುವ ಖಬ್ರಸ್ತಾನದಲ್ಲಿ ಸಂಜೆ ಅಂತ್ಯಕ್ರಿಯೆ ನಡೆಯಿತು.

ಉಡುಪಿ ಜಿಲ್ಲೆಯ ಶಿರ್ವ ಗ್ರಾಮದಲ್ಲಿ 1961, ಆ.28ರಂದು ಜನಿಸಿದ್ದ ಅವರು, ಮಂಗಳೂರು
ವಿಶ್ವವಿದ್ಯಾಲಯದಲ್ಲಿ ಪದವಿ, ಸ್ನಾತಕೋತ್ತರ ಪದವಿ, ದೆಹಲಿಯ ಜವಾಹರಲಾಲ್ ನೆಹರೂ ವಿ.ವಿ.ಯಿಂದ ಎಂ.ಫಿಲ್, ಪಿಎಚ್ಡಿ ಹಾಗೂ ಷಿಕಾಗೊ ವಿಶ್ವವಿದ್ಯಾಲಯ ದಲ್ಲಿ ಪೋಸ್ಟ್ ಡಾಕ್ಟೊರಲ್ ಪದವಿ ಪಡೆದಿದ್ದರು.

ಮಂಗಳೂರು ಹಾಗೂ ಗೋವಾ ವಿಶ್ವವಿದ್ಯಾಲಯಗಳಲ್ಲಿ ರಾಜ್ಯಶಾಸ್ತ್ರ ಅಧ್ಯಾಪಕರಾಗಿದ್ದ ಅವರು, 1994ರಿಂದ ಮೈಸೂರು ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರ ಅಧ್ಯಯನ ವಿಭಾಗದಲ್ಲಿ ಪ್ರಾಧ್ಯಾಪಕ, ಮುಖ್ಯಸ್ಥ ಹಾಗೂ ವಿಶ್ವವಿದ್ಯಾಲಯದ ಕಲಾನಿಕಾಯದ ಡೀನ್ ಆಗಿದ್ದರು. 2022ರಲ್ಲಿ ಹಂಗಾಮಿ ಕುಲಪತಿಯಾಗಿ ನಿವೃತ್ತರಾಗಿದ್ದರು.

‘ಕರ್ನಾಟಕದಲ್ಲಿ ಬಹುರೂಪಿ ಸ್ತ್ರೀವಾದ ಕಥನಗಳು ಮತ್ತು ಚಳವಳಿ’, ‘ಅಸ್ಮಿತೆ, ರಾಜಕಾರಣ ಮತ್ತು ಮೂಲಭೂತವಾದ’, ‘ಅಲ್ಪಸಂಖ್ಯಾತರು ಮತ್ತು ಜಾತಿ ವ್ಯವಸ್ಥೆ’. ‘ಕಲೊನಿಯಲ್ ಆ್ಯಂಡ್ ಪೋಸ್ಟ್ ಕಲೊನಿಯಲ್ ಐಡೆಂಟಿಟಿ ಪಾಲಿಟಿಕ್ಸ್ ಇನ್ ಸೌತ್ ಏಷ್ಯಾ’, ‘ಗಾಂಧಿಯ ಹಿಂದ್ ಸ್ವರಾಜ್’ ಸೇರಿದಂತೆ 15ಕ್ಕೂ ಹೆಚ್ಚು ಕೃತಿಗಳನ್ನು ಬರೆದಿದ್ದ ಅವರು, ನೂರಾರು ಸಂಶೋಧನಾ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದ್ದರು.

2011, 2021ರಲ್ಲಿ ಕರ್ನಾಟಕ ಸಾಹಿತ್ಯ ಅಕಾಡೆಮಿ ಪುಸ್ತಕ ಬಹುಮಾನ ದೊರೆತ್ತಿತ್ತು. ‘ಪ್ರಜಾವಾಣಿ’ ಹಾಗೂ ‘ಡೆಕ್ಕನ್ ಹೆರಾಲ್ಡ್’ನಲ್ಲಿ ನೂರಾರು ಅಂಕಣಬರಹಗಳನ್ನು ಬರೆದಿದ್ದರು. ದೇಶ– ವಿದೇಶದ ಜರ್ನಲ್ಗಳಲ್ಲಿ 200ಕ್ಕೂ ಹೆಚ್ಚು ಲೇಖನಗಳು ಪ್ರಕಟವಾಗಿದ್ದವು.

2005ರಲ್ಲಿ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಬುಡಕಟ್ಟು ಸಮುದಾಯಗಳ ಸ್ಥಳಾಂತರ ಕುರಿತ ಹೈಕೋರ್ಟ್ ಸಮಿತಿಯ ಮುಖ್ಯಸ್ಥರಾಗಿ ವರದಿ ತಯಾರಿಸಿದ್ದರು. ರಾಜ್ಯ ಸರ್ಕಾರ ಅದನ್ನು ಇನ್ನೂ
ಅನುಷ್ಠಾನಗೊಳಿಸಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.