ಬೆಂಗಳೂರು: ಮಾಹಿತಿ ಹಂಚಿಕೆಯನ್ನು ನಿರ್ಬಂಧಿಸಲು ಜಾರಿಗೆ ತರಲಾಗಿರುವ ‘ಸಹಯೋಗ್ ಪೋರ್ಟಲ್’ ಆರಂಭಿಸಿರುವ ಕೇಂದ್ರದ ನಿಲುವನ್ನು ಎತ್ತಿಹಿಡಿದಿದ್ದ ಏಕಸದಸ್ಯ ನ್ಯಾಯಪೀಠದ ಆದೇಶವನ್ನು ಪ್ರಶ್ನಿಸಿ ‘ಎಕ್ಸ್ ಕಾರ್ಪ್’ ಸಲ್ಲಿಸಿರುವ ಮೇಲ್ಮನವಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ.

ಏಕಸದಸ್ಯ ನ್ಯಾಯಪೀಠದ ಆದೇಶ ರದ್ದುಗೊಳಿಸುವಂತೆ ಕೋರಿ ‘ಎಕ್ಸ್ ಕಾರ್ಪ್’ (ಈ ಹಿಂದಿನ ಟ್ವಿಟರ್) ಸ್ಥಳೀಯ ಪ್ರತಿನಿಧಿ ಸಲ್ಲಿಸಿರುವ ರಿಟ್ ಮೇಲ್ಮನವಿಯನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ನೇತೃತ್ವದ ವಿಭಾಗೀಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ‘ಎಕ್ಸ್ ಕಾರ್ಪ್’ ಪರ ಪದಾಂಕಿತ ಹಿರಿಯ ವಕೀಲ ಕೆ.ಜಿ.ರಾಘವನ್ ಮತ್ತು ಕೇಂದ್ರ ಸರ್ಕಾರದ ಪರ ಕೆ.ಅರವಿಂದ ಕಾಮತ್ ಅವರ ಕ್ಲುಪ್ತ ವಿವರಣೆ ಆಲಿಸಿದ ನ್ಯಾಯಪೀಠ; ಕೇಂದ್ರ ಕಾನೂನು, ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ, ಗೃಹ, ಹಣಕಾಸು, ರಕ್ಷಣೆ, ರೈಲ್ವೆ, ಬೃಹತ್ ಕೈಗಾರಿಕೆ ಮತ್ತು ಗ್ರಾಮೀಣಾಭಿವೃದ್ಧಿ ಸಚಿವಾಲಯಗಳಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿತು. ವಿಚಾರಣೆಯನ್ನು ಜೂನ್ 10ಕ್ಕೆ ಮುಂದೂಡಲಾಗಿದೆ.

ದೇಶದಲ್ಲಿನ ಸಾಮಾಜಿಕ ಜಾಲತಾಣಗಳನ್ನು ನಿಯಂತ್ರಿಸುವ ನಿಟ್ಟಿನಲ್ಲಿ, ಮಾಹಿತಿ ತಂತ್ರಜ್ಞಾನ ಕಾಯ್ದೆ–2000ರ ಕಲಂ 79(3) (ಬಿ) ಅಡಿಯಲ್ಲಿ ‘ಸಹಯೋಗ್ ಪೋರ್ಟ್ಲ್’ ಪ್ರಾರಂಭಿಸಿದ್ದ ಕೇಂದ್ರ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಎಕ್ಸ್ ಕಾರ್ಪ್ನ ಸ್ಥಳೀಯ ಪ್ರತಿನಿಧಿ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ವಜಾಗೊಳಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.