ಗುರುವಾರ, 29 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜನಾರ್ದನ ರೆಡ್ಡಿ ಬಿಜೆಪಿ ಕರೆತರುವ ಯತ್ನ: ಶಾ, ನಡ್ಡಾ ಜೊತೆ ಶ್ರೀರಾಮುಲು ಚರ್ಚೆ

Published 30 ಜನವರಿ 2024, 14:13 IST
Last Updated 30 ಜನವರಿ 2024, 14:13 IST
ಅಕ್ಷರ ಗಾತ್ರ

ನವದೆಹಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹಾಗೂ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ಪಕ್ಷದ ಮಾಜಿ ಸಚಿವ ಬಿ. ಶ್ರೀರಾಮುಲು ಭೇಟಿ ಮಾಡಿ ಚರ್ಚಿಸಿದರು.

ಕಲ್ಯಾಣರಾಜ್ಯ ಪ್ರಗತಿ ಪಕ್ಷದ ಅಧ್ಯಕ್ಷ ಹಾಗೂ ಶಾಸಕ ಜನಾರ್ದನ ರೆಡ್ಡಿ ಅವರೂ ಸದ್ಯದಲ್ಲೇ ಬಿಜೆಪಿಗೆ ವಾಪಸಾಗಲಿದ್ದಾರೆ ಎಂಬ ಚರ್ಚೆ ಪಕ್ಷದಲ್ಲಿ ಆರಂಭವಾಗಿದೆ. ‘ಬಿಜೆಪಿ ಸೇರ್ಪಡೆಗೆ ರೆಡ್ಡಿ ಉತ್ಸುಕರಾಗಿದ್ದಾರೆ. ಅವರನ್ನು ಶೀಘ್ರದಲ್ಲಿ ಪಕ್ಷಕ್ಕೆ ಸೇರಿಸಿಕೊಳ್ಳಬೇಕು. ಇದರಿಂದ ಬಳ್ಳಾರಿ, ಕೊಪ್ಪಳ ಮತ್ತಿತರ ಕ್ಷೇತ್ರಗಳಲ್ಲಿ ಪಕ್ಷಕ್ಕೆ ಅನುಕೂಲವಾಗಲಿದೆ’ ಎಂದು ಶ್ರೀರಾಮುಲು ಅವರು ವರಿಷ್ಠರ ಗಮನಕ್ಕೆ ತಂದರು. 

ಶ್ರೀರಾಮುಲು ಅವರು ಬಳ್ಳಾರಿ ಲೋಕಸಭಾ ಕ್ಷೇತ್ರದ ಟಿಕೆಟ್‌ ಆಕಾಂಕ್ಷಿಯೂ ಆಗಿದ್ದಾರೆ. ‘ಪಕ್ಷ ಅವಕಾಶ ನೀಡಿದರೆ ಸ್ಪರ್ಧಿಸಲು ಸಿದ್ಧ’ ಎಂದೂ ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT