ಬೆಂಗಳೂರು: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ವಯನಾಡ್ ಸಂಸದೆ ಪ್ರಿಯಾಂಕಾ ಗಾಂಧಿ ವಿರುದ್ಧ ದೇಶದ ಹಲವು ಪೊಲೀಸ್ ಠಾಣೆಗಳಲ್ಲಿ ದೂರು ನೀಡಿರುವ ಹಾಗೂ ನ್ಯಾಯಾಲಯಗಳಲ್ಲಿ ಪಿಐಎಲ್ ಸಲ್ಲಿಸಿರುವ ಕರ್ನಾಟಕದ ಕಾರ್ಯಕರ್ತ ಎಸ್.ವಿಘ್ನೇಶ್ ಶಿಶಿರ್ ಅವರಿಗೆ ವೈ ಪ್ಲಸ್ ಭದ್ರತೆ ನೀಡಿ ಎಂದು ಅಲಹಬಾದ್ ಹೈಕೋರ್ಟ್ನ ಲಖನೌ ಪೀಠವು ಕೇಂದ್ರ ಗೃಹ ಸಚಿವಾಲಯಕ್ಕೆ ಸೂಚಿಸಿದೆ.

ಬಿಜೆಪಿ ರಾಜ್ಯ ಘಟಕದ ಸದಸ್ಯರಾಗಿರುವ ವಿಘ್ನೇಶ್ ಅವರು, ‘ರಾಹುಲ್ ಗಾಂಧಿ ಅವರು ಬ್ರಿಟನ್ ಪಾಸ್ಪೋರ್ಟ್ ಹೊಂದಿದ್ದಾರೆ. ಅವರ ಲೋಕಸಭೆ ಸದಸ್ಯತ್ವವನ್ನು ರದ್ದುಪಡಿಸಬೇಕು ಮತ್ತು ತಮ್ಮ ಪೌರತ್ವದ ಬಗ್ಗೆ ಸುಳ್ಳು ಮಾಹಿತಿ ನೀಡಿದ್ದಕ್ಕೆ ಕಾನೂನು ಕ್ರಮ ತೆಗೆದುಕೊಳ್ಳಬೇಕು’ ಎಂದು ಕೋರಿ ಅಲಹಾಬಾದ್ ಹೈಕೋರ್ಟ್ನ ಲಖನೌ ಪೀಠಕ್ಕೆ ಅರ್ಜಿ ಸಲ್ಲಿಸಿದ್ದರು.

ಆ ಅರ್ಜಿಯನ್ನು ಇದೇ ಮೇ 5ರಂದು ಪೀಠವು ವಜಾ ಮಾಡಿತ್ತು. ಜತೆಗೆ, ಸಾಕ್ಷ್ಯಗಳು ದೊರೆತರೆ ಮರುಪರಿಶೀಲನಾ ಅರ್ಜಿ ಸಲ್ಲಿಸಬಹುದು ಎಂದು ಹೇಳಿತ್ತು. ಅದರಂತೆ ಮೇ 15ರಂದೇ ವಿಘ್ನೇಶ್ ಮರುಪರಿಶೀಲನಾ ಅರ್ಜಿ ಸಲ್ಲಿಸಿದ್ದರು. ಆ ನಂತರ ರಾಯಬರೇಲಿಯ ಎಸ್ಪಿಗೆ ದೂರು ನೀಡಿದ್ದರು.

ಅದರ ಬೆನ್ನಲ್ಲೇ ಅಲಹಬಾದ್ ಹೈಕೋರ್ಟ್ನ ಲಖನೌ ಪೀಠಕ್ಕೆ ರಿಟ್ ಅರ್ಜಿ ಸಲ್ಲಿಸಿದ್ದ ವಿಘ್ನೇಶ್, ‘ದೂರು ದಾಖಲಿಸಿದ ಮತ್ತು ಅರ್ಜಿಗಳನ್ನು ಸಲ್ಲಿಸಿದ ನಂತರ ನನಗೆ ಪ್ರತಿದಿನ ಜೀವ ಬೆದರಿಕೆ ಬರುತ್ತಿದೆ. ಹೀಗಾಗಿ ನನಗೆ ವೈ ಪ್ಲಸ್ ಭದ್ರತೆ ಒದಗಿಸಬೇಕು’ ಎಂದು ಕೋರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.