ಯಾದಗಿರಿ: ಮುಂದಿನ ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆಯಾದರೆ ಕಾಂಗ್ರೆಸ್ ಹೈಕಮಾಂಡ್ ಹಾಲುಮತ ಸಮುದಾಯದ ಕೊಪ್ಪಳದ ಶಾಸಕ ರಾಘವೇಂದ್ರ ಹಿಟ್ನಾಳ್ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ತಿಂಥಣಿ ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠದ ಧರ್ಮದರ್ಶಿ ಭೀಮಣ್ಣ ಮೇಟಿ ಹೇಳಿದರು.

ಕಲ್ಯಾಣ ಕರ್ನಾಟಕ ಭಾಗದ ಹಾಲಮತ ಸಮುದಾಯ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸಂಪೂರ್ಣವಾಗಿ ಕಾಂಗ್ರೆಸ್ಗೆ ಬೆಂಬಲಿಸಿತು. ಈ ಭಾಗದ 42ಕ್ಕೂ ಹೆಚ್ಚು ಕ್ಷೇತ್ರಗಳಿದ್ದು, ಹಾಲುಮತ ಸಮುದಾಯದ ಏಕೈಕ ಶಾಸಕ ಹಿಟ್ನಾಳ್. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಹಾಲುಮತ ಸಮುದಾಯಕ್ಕೆ ನಿರೀಕ್ಷಿಸಿದಷ್ಟು ಟಿಕೆಟ್ ಸಿಗಲಿಲ್ಲ. ಅದನ್ನು ಸರಿದೂಗಿಸಲು ಹಿಟ್ನಾಳ್ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಪ್ರಕಟಣೆಯಲ್ಲಿ ಕೋರಿದ್ದಾರೆ.

ಮುಂಬರುವ 2028ರ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲು ಕಾಂಗ್ರೆಸ್ ಹೈಕಮಾಂಡ್ ಹಾಲುಮತ ಸಮುದಾಯಕ್ಕೆ ಕಲ್ಯಾಣ ಕರ್ನಾಟಕ ಭಾಗದಲ್ಲಿ ಹೆಚ್ಚಿಗೆ ಟಿಕೆಟ್ ನೀಡಬೇಕು ಎಂದಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260328-30-1307702695

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.