ಯಾದಗಿರಿ: ‘ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕಡ್ಡಾಯವಾಗಿ ಆವರ್ತ ನಿಧಿ ಸ್ಥಾಪಿಸಿ, ವೈಜ್ಞಾನಿಕವಾಗಿ ಕನಿಷ್ಠ ಬೆಂಬಲ ಬೆಲೆ (ಎಂಎಸ್ಪಿ) ನಿಗದಿ ಮಾಡಿ, ವರ್ಷದ ಎಲ್ಲ ದಿನಗಳೂ ಎಪಿಎಂಸಿಗಳಲ್ಲಿ ಖರೀದಿ ಕೇಂದ್ರಗಳನ್ನು ತೆರೆದರೆ ಕೃಷಿ ಉತ್ಪನ್ನಗಳ ದರಗಳು ಎಂಎಸ್ಪಿಗಿಂತ ಕೆಳಗೆ ಹೋಗುವುದಿಲ್ಲ’ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಕೋಡಿಹಳ್ಳಿ ಚಂದ್ರಶೇಖರ್ ಹೇಳಿದರು.

‘ಎಂಎಸ್ಪಿ ಸೇರಿದಂತೆ ರೈತರಿಗೆ ಉಪಯೋಗ ಆಗುವಂತ ಕ್ರಮಗಳನ್ನು ಎಂ.ಎಸ್. ಸ್ವಾಮಿನಾಥನ್ ಆಯೋಗ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿ 26 ವರ್ಷಗಳು ಕಳೆದಿವೆ. ವರದಿ ಆಧರಿಸಿ ಕೃಷಿ ಉತ್ಪನ್ನಗಳಿಗೆ ಉತ್ಪಾದನಾ ವೆಚ್ಚಕ್ಕೆ ಶೇ 50ರಷ್ಟು ಲಾಭಾಂಶ ಸೇರಿಸಿ ಕನಿಷ್ಠ ಬೆಂಬಲ ಬೆಲೆ ನಿಗದಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಇದುವರೆಗೂ ಕಿಂಚಿತ್ತು ಪ್ರಯತ್ನಿಸಿಲ್ಲ’ ಎಂದು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ದೂರಿದರು.

‘ರಾಜ್ಯದಲ್ಲಿ ರದ್ದಾಗದ ವಿವಾದಿತ ಕೃಷಿ ಕಾಯ್ದೆಗಳು, ಎಂಎಸ್ಪಿ ಸೇರಿದಂತೆ ಇತರೆ ಬೇಡಿಕೆಗಳ ಈಡೇರಿಕೆಗಾಗಿ ಮುಂದಿನ ನಡೆಗಳ ಕುರಿತು ಚರ್ಚಿಸಲು ಬೆಂಗಳೂರಿನಲ್ಲಿ ಮಾರ್ಚ್ 30ರಂದು ರಾಜ್ಯ ರೈತರ ಸಭೆ ಕರೆಯಲಾಗಿದೆ. ಸಭೆಯಲ್ಲಿ ಭಾಗವಹಿಸಲಿರುವ ಮುಖಂಡರು ಹಾಗೂ ರೈತರೊಂದಿಗೆ ಮುಂದಿನ ಕ್ರಮಗಳ ಬಗ್ಗೆ ಸುದೀರ್ಘವಾಗಿ ಚರ್ಚಿಸಿ ಹೋರಾಟ ರೂಪಿಸಲಾಗುವುದು’ ಎಂದು ಹೇಳಿದರು.

‘ಕಳೆದ ವಿಧಾನಸಭಾ ಚುನಾವಣೆಯ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ವಿವಾದಿತ ಕೃಷಿ ಕಾಯ್ದೆಗಳನ್ನು ರದ್ದು ಮಾಡುವುದಾಗಿ ಸೇರಿಸಿತ್ತು. ಅನಿವಾರ್ಯವಾಗಿ ನಾವೂ ಸಿದ್ದರಾಮಯ್ಯ ಅವರಿಗೆ ಬೆಂಬಲಿಸಿದ್ದೆವು. ಇಲ್ಲಿಯವರೆಗೂ ವಿವಾದಿತ ಕೃಷಿ ಕಾಯ್ದೆಗಳನ್ನು ರದ್ದು ಮಾಡಿ, ಎಂಎಸ್ಪಿ ಜಾರಿ ಮಾಡಿಲ್ಲ. ಇದು ಯಾವ ಸೀಮೆಯ ಸರ್ಕಾರ? ಕನಿಷ್ಠ ಗೌರವ ಉಳಿಸಿಕೊಳ್ಳುವ ಯೋಗ್ಯತೆ ಇಲ್ಲದೆ ಇದ್ದರೆ ಮುಂದಿನ ಚುನಾವಣೆಯಲ್ಲಿ 50 ಸ್ಥಾನಗಳೂ ಬರುವುದಿಲ್ಲ’ ಎಂದರು.

‘ಈ ಭಾಗದ ರೈತರ ಜಮೀನುಗಳಿಗೆ ನೀರು ಒದಗಿಸಬೇಕು. ನಾರಾಯಣಪುರ ಜಲಾಶಯದಲ್ಲಿ ಸಾಕಷ್ಟು ನೀರಿದ್ದು ಏಪ್ರಿಲ್ 3ರವರೆಗೆ ಬದಲು ಏ.15 ರವರೆಗೆ ನೀರು ಹರಿಸಿದರೆ ರೈತರಿಗೆ ಅನುಕೂಲವಾಗಲಿದೆ’ ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಸಂಘದ ಮುಖಂಡರಾದ ಮಲ್ಲಣ್ಣಗೌಡ ಪಾಟೀಲ, ಚಂದ್ರಶೇಖರ ಜಮಖಂಡಿ, ಬಸನಗೌಡ ಚಿಂಚೋಳಿ, ಬಸನಗೌಡ ಗಂವ್ಹಾರ, ಬಿ.ವಿ.ಗೌಡ, ಮಹಾಂತೇಶ ಜಮಾದಾರ್, ವಿಠ್ಠಲ ಮಾಕಾ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260325-30-1326718622

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.