ಯಾದಗಿರಿ: ರಾಜ್ಯ ಸರ್ಕಾರದ ಕೆಪಿಎಸ್ ಮ್ಯಾಗ್ನೆಟ್ ಶಾಲೆ ಯೋಜನೆಯಡಿ ರಾಜ್ಯದ 40 ಸಾವಿರ ಶಾಲೆಗಳ ಬಾಗಿಲು ಮುಚ್ಚಲು ಮುಂದಾಗಿದ್ದಕ್ಕೆ ವಿರೋಧಿಸಿ ಏ.10 ರಂದು ಬೆಂಗಳೂರು ನಗರದ ಫ್ರೀಡಂ ಪಾರ್ಕ್ನಲ್ಲಿ ರಾಜ್ಯಮಟ್ಟದ ಬೃಹತ್ ಜನ ಸಮಾವೇಶ ಆಯೋಜಿಸಲಾಗಿದೆ’ ಎಂದು ಎಐಡಿಎಸ್ಒ ಜಿಲ್ಲಾ ಘಟಕದ ಸಂಚಾಲಕಿ ಶಿಲ್ಪಾ ಬಿ.ಕೆ. ತಿಳಿಸಿದರು.

ಹತ್ತಿರದ ಹೆಡಗಿಮದ್ರಾ ಗ್ರಾಮದಲ್ಲಿ ಎಐಡಿಎಸ್ಒ ವತಿಯಿಂದ ರಾಜ್ಯ ಮಟ್ಟದ ಬೃಹತ್ ಜನ ಸಮಾವೇಶದ ಭಿತ್ತಿ ಪತ್ರ ಬಿಡುಗಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಯೋಜನೆ ವಿರುದ್ಧ ಕಳೆದ 4 ತಿಂಗಳಿಂದ ನಿರಂತರ ಹೋರಾಟಗಳು ನಡೆಸಲಾಗುತ್ತಿದೆ. ಆದರೆ, ಸರ್ಕಾರ ಡಿಡಿಪಿಐ ಮತ್ತು ಬಿಇಒಗಳ ಸಭೆ ನಡೆಸಿದೆ. ಮುಚ್ಚಲಿರುವ ಶಾಲೆಗಳ ಮ್ಯಾಪಿಂಗ್ ನಡೆಸಲಾಗುತ್ತಿದೆ. ಜತೆಗೆ ಮಕ್ಕಳನ್ನು ಮುಂದಿನ ಶೈಕ್ಷಣಿಕ ಸಾಲಿಗೆ ಕೆಪಿಎಸ್ ಮ್ಯಾಗ್ನೇಟ್ ಶಾಲೆಗಳಲ್ಲಿ ದಾಖಲಿಸುವಂತೆ ಪೋಷಕರ ಮನವೊಲಿಸಲು ಮುಚ್ಚಲಿರುವ ಶಾಲೆಗಳ ಮುಖ್ಯಶಿಕ್ಷಕರಿಗೆ ಸೂಚಿಸಲಾಗಿದೆ. ಇದು ಜನ ವಿರೋಧಿ ಯೋಜನೆಯಾಗಿದ್ದು, ಎಐಡಿಎಸ್ಒ ಈ ಯೋಜನೆಯನ್ನು ತೀವ್ರವಾಗಿ ಖಂಡಿಸುತ್ತದೆ’ ಎಂದರು.

‘ಸಮಾವೇಶದಲ್ಲಿ ಹಿರಿಯ ಸಾಹಿತಿ ಹಂಪ ನಾಗರಾಜಯ್ಯ, ಕೆ.ಮರುಳಸಿದ್ದಪ್ಪ, ಪ್ರೊ. ಎಸ್.ಜಿ. ಸಿದ್ದರಾಮಯ್ಯ, ಅಖಿಲ ಭಾರತ ಶಿಕ್ಷಣ ಉಳಿಸಿ ಸಮಿತಿ ರಾಜ್ಯಾಧ್ಯಕ್ಷ ಅಲ್ಲಮಪ್ರಭು ಬೆಟ್ಟದೂರು, ವಿಶ್ರಾಂತ ಕುಲಪತಿ ಪ್ರೊ. ಎ.ಮುರಿಗೆಪ್ಪ ಮತ್ತು ಪ್ರೊ. ಸಬಿಹಾ ಭೂಮಿಗೌಡ, ಹೋರಾಟಗಾರ ರಾಘವೇಂದ್ರ ಕುಷ್ಟಗಿ, ನ್ಯಾಯವಾದಿ ಹೇಮಲತಾ ಮಹಿಷಿ, ಶಿಕ್ಷಣ ತಜ್ಞ ನಿರಂಜನರಾಧ್ಯ ವಿ.ಪಿ., ದಲಿತ ಸಂಘರ್ಷ ಸಮಿತಿಯ ಗುರುಪ್ರಸಾದ ಕೆರೆಗೋಡು, ಮಾವಳ್ಳಿ ಶಂಕರ, ಕರ್ನಾಟಕ ರಾಜ್ಯ ರೈತ ಸಂಘದ ಬಡಗಲಪುರ ನಾಗೇಂದ್ರ, ಸಾಮಾಜಿಕ ಹೋರಾಟಗಾರ ಉಗ್ರನರಸಿಂಹೇಗೌಡ, ಎಐಡಿಎಸ್ಒ ರಾಜ್ಯ ಕಾರ್ಯದರ್ಶಿ ಅಜಯ ಕಾಮತ, ಅಖಿಲ ಭಾರತ ಶಿಕ್ಷಣ ಉಳಿಸಿ ಸಮಿತಿ ಉಪಾಧ್ಯಕ್ಷ ವಿ.ಎನ್.ರಾಜಶೇಖರ, ಎಐಕೆಕೆಎಂಎಸ್ ರೈತ ಸಂಘದ ಅಧ್ಯಕ್ಷ ಶಶಿಧರ ಎಂ., ಎಐಯುಟಿಯುಸಿ ಕಾರ್ಮಿಕ ಸಂಘಟನೆಯ ಅಧ್ಯಕ್ಷ ಸೋಮಶೇಖರ ಕೆ., ಎಐಎಂಎಸ್ಎಸ್ ಮಹಿಳಾ ಸಂಘಟನೆಯ ಕಾರ್ಯದರ್ಶಿ ಶೋಭಾ ಎಸ್., ಎಐಡಿವೈಒ ಯುವಜನ ಸಂಘಟನೆ ಕಾರ್ಯದರ್ಶಿ ಸಿದ್ಧಲಿಂಗ ಬಾಗೇವಾಡಿ, ಎಐಡಿಎಸ್ಒ ರಾಜ್ಯಾಧ್ಯಕ್ಷೆ ಅಶ್ವಿನಿ ಕೆ.ಎಸ್. ಸೇರಿದಂತೆ ಸಾಹಿತಿಗಳು, ಹೋರಾಟಗಾರರು ಹಾಗೂ ಶಿಕ್ಷಣ ತಜ್ಞರು ಭಾಗವಹಿಸಲಿದ್ದಾರೆ’ ಎಂದು ತಿಳಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260406-30-762491818

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.