ಯಾದಗಿರಿ: ಜಾಗತಿಕ ಸಂಕಷ್ಟದ ನಡುವೆಯೂ ಜನರ ಹಿತದೃಷ್ಟಿಯಿಂದ ಕೇಂದ್ರ ಸರ್ಕಾರ ತೈಲದ ಮೇಲಿನ ಸುಂಕವನ್ನು ಕಡಿತಗೊಳಿಸಿದೆ. ರಾಜ್ಯ ಸರ್ಕಾರವೂ ತನ್ನ ಸುಂಕದಲ್ಲಿ ಕಡಿತ ಮಾಡಬೇಕು ಎಂದು ಬಿಜೆಪಿ ಜಿಲ್ಲಾ ಘಟಕದ ಮಾಜಿ ಅಧ್ಯಕ್ಷ ಚಂದ್ರಶೇಖರಗೌಡ ಮಾಗನೂರ ಹೇಳಿದ್ದಾರೆ.

ಯುದ್ಧದಿಂದ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಏರಿಕೆಯಾಗಿದೆ. ಇಂತಹ ಸಂಕಷ್ಟದ ಸಂದರ್ಭದಲ್ಲಿ ದೇಶದ ಜನರ ಹಿತವನ್ನು ಗಮನದಲ್ಲಿಟ್ಟುಕೊಂಡು ಪ್ರಧಾವಿ ನರೇಂದ್ರ ಮೋದಿ ಸುಂಕ ಕಡಿತಗೊಳಿಸಿದ್ದಾರೆ. ಇದರಿಂದ ಸಾರಿಗೆ, ಕೃಷಿ ಸೇರಿದಂತೆ ನಿತ್ಯದ ಖರ್ಚು ಕಡಿಮೆಯಾಗಲು ಸಹಕಾರಿಯಾಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜ್ಯದಲ್ಲಿ ಈಚೆಗೆ ವಿದ್ಯುತ್ ದರ, ಹಾಲು, ಸಾರಿಗೆ ದರ ಹೆಚ್ಚಳ ಮಾಡಲಾಗಿದೆ. ಅನೇಕ ಅಗತ್ಯ ವಸ್ತುಗಳ ಬೆಲೆಯಲ್ಲಿಯೂ ಏರಿಕೆಯಾಗಿದೆ. ಇದರ ಪರಿಣಾಮವಾಗಿ ಜನರು ಸಂಕಷ್ಟದಲ್ಲಿದ್ದಾರೆ. ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆಯಿಂದ ಮತ್ತಷ್ಟು ಹೊರೆ ಬೀಳುವ ಪರಿಸ್ಥಿತಿ ನಿರ್ಮಾಣವಾಗಿದೆ. ರಾಜ್ಯ ಸರ್ಕಾರ ತಕ್ಷಣವೇ ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ರಾಜ್ಯ ಸುಂಕವನ್ನು ಕಡಿತಗೊಳಿಸಿ ಜನರಿಗೆ ನೆರವಾಗಬೇಕು ಎಂದಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260328-30-526519437

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.