ಯಾದಗಿರಿ: ‘ಪ್ರಧಾನಿ ನರೇಂದ್ರ ಮೋದಿಯವರು ಹೇಳೋದು ಮಹಿಳಾ ಬಿಲ್ ಎಂದು. ಆದರೆ, ಅದರಲ್ಲಿ ಕ್ಷೇತ್ರ ಪುನರ್ವಿಂಗಡಣೆಯಂತಹ ಮಾರಕ ಕಾನೂನುಗಳು ಸೇರಿಸಿ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ’ ಎಂದು ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಮರೆಪ್ಪ ಬಿಳ್ಹಾರ ಆರೋಪಿಸಿದರು.

ನಗರದಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಬಿಜೆಪಿ ಆಡಳಿತದಲ್ಲಿ ಮಣಿಪುರದಲ್ಲಿ ನಡೆದ ಹಿಂಸಾಚಾರದಲ್ಲಿ ಹೆಚ್ಚಿನವರು ಮಹಿಳೆ ಮತ್ತು ಮಕ್ಕಳು ಹಿಂಸೆಗೊಳಪಟ್ಟಿದ್ದಾರೆ. 2023ರಲ್ಲಿ ಇಂಪಾಲ್ನಲ್ಲಿ ಇಬ್ಬರು ಮಹಿಳೆಯರು ಮತ್ತು ಒಂದು ಮಗುವನ್ನು ಆಂಬುಲೆನ್ಸ್ನಲ್ಲಿ ಸುಟ್ಟು ಹಾಕಲಾಗಿದೆ. ನಂತರ ನಡೆದ ಸಂಘರ್ಷದಲ್ಲಿ ಸಾವನ್ನಪ್ಪಿದವರಲ್ಲಿ ಕನಿಷ್ಠ 21 ಮಹಿಳೆಯರಿದ್ದರು ಎಂಬುದಾಗಿ ವರದಿಯಾಗಿದೆ’ ಎಂದರು.

‘ಮಹಿಳೆಯರ ಬಗ್ಗೆ ಕಾಳಜಿ ಹೊಂದಿರುವ ಏಕೈಕ ಪಕ್ಷವೆಂದರೆ ಅದು ಕಾಂಗ್ರೆಸ್ ಮಾತ್ರ. ನಮ್ಮ ಪಕ್ಷದಿಂದ ಮಹಿಳೆಯರನ್ನು ರಾಷ್ಟ್ರಪತಿ, ಪ್ರಧಾನಿ ಹಾಗೂ ಲೋಕಸಭೆಯ ಸ್ಪೀಕರ್ ಮಾಡಲಾಗಿದೆ. ಸ್ಥಳೀಯ ಚುನಾವಣೆಯಲ್ಲೂ ಮೀಸಲಾತಿ ತಂದಿದ್ದು, ಕಾಂಗ್ರೆಸ್ ಪಕ್ಷ ಎಂಬುದನ್ನು ಬಿಜೆಪಿಯವರಿಗೆ ನೆನಪಿಸುತ್ತೇನೆ’ ಎಂದು ಕುಟುಕಿದರು.

‘ಹಣದುಬ್ಬರಕ್ಕೆ ಪೂರ ಕವಾಗಿ ಆಶಾ, ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಹೆಚ್ಚಿಸಬೇಕೆಂಬ ಕೂಗು ಕೇಳಿ ಬರುತ್ತಿದೆ. ಸಿಎಂ ಜತೆಗೆ ಚರ್ಚಿಸಿ ಒಮ್ಮತದ ನಿರ್ಧಾರ ತೆಗೆದುಕೊಳ್ಳದೆ ಮೋದಿಯವರು ಏಕಪಕ್ಷೀಯ ನಿರ್ಧಾರ ಮಾಡಿದ್ದಾರೆ’ ಎಂದು ಆರೋಪಿಸಿದರು.

ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಸರೆಡ್ಡಿ ಅನಪುರ ಮಾತನಾಡಿ, ‘ಮಹಿಳಾ ಮೀಸಲಾತಿಯ ಬಗ್ಗೆ ನಮ್ಮ ಕಾಂಗ್ರೆಸ್ ಪಕ್ಷ ವಿರೋಧ ಮಾಡಿದೆ ಎಂದು ಬಿಜೆಪಿ–ಜೆಡಿಎಸ್ನವರು ಸುಳ್ಳು ಹೇಳುತ್ತಿದ್ದಾರೆ. ಅವರು ತಂದ ಮಸೂದೆಯಲ್ಲಿನ ಅಂಶಗಳ ಬಗ್ಗೆ ದೇಶದ ಜನರಿಗೆ ಸಮಗ್ರ ಮಾಹಿತಿ ನೀಡದೆ ಕಣ್ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ’ ಎಂದು ದೂರಿದರು.

ಸುದ್ದಿಗೋಷ್ಠಿಯಲ್ಲಿ ರಾಘವೇಂದ್ರ ಮಾನಸಗಲ್, ಮಲ್ಲಿಕಾರ್ಜುನ ಈಟೆ, ಬಾಪೂಗೌಡ ಮಾಚನೂರ, ಬಸವರಾಜಪ್ಪ ಬಾಚವಾರ, ಶಿವರಾಜ ಬಾವೂರ, ನಾಗನಗೌಡ ಹಳಿಗೇರ, ಮರಿಲಿಂಗಪ್ಪ ಬಂದಳ್ಳಿ ಇತರರು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-30-412832708

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.