ಬೇಲೂರು: ‘ಚಿತ್ರದುರ್ಗ ದಲ್ಲಿ ಮೇ 9 ರಂದು ನಡೆಯಲಿರುವ ಬಿಜೆಪಿ ರಾಷ್ಟ್ರೀಯ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಅವರ ಅಭಿಮಾನೋತ್ಸವ ಸಮಾರಂಭಕ್ಕೆ ಕ್ಷೇತ್ರದ ಸಾವಿರಾರು ಅಭಿಮಾನಿಗಳು ಸ್ವಯಂ ಪ್ರೇರಿತವಾಗಿ ಹೊರಟಿದ್ದಾರೆ’ ಎಂದು ಶಾಸಕ ಎಚ್.ಕೆ.ಸುರೇಶ್ ತಿಳಿಸಿದರು.

ಇಲ್ಲಿನ ಶಾಸಕರ ನಿವಾಸದಲ್ಲಿ ಸೋಮವಾರ ಸಂಜೆ ಸುದ್ದಿಗಾರರೊಂದಿಗೆ ಮಾತನಾಡಿ, ‘ದಕ್ಷಿಣ ಭಾರತದಲ್ಲಿ ಕಮಲವನ್ನು ಅರಳಿಸಿದ ಧೀಮಂತ, ರೈತ ನಾಯಕ ಯಡಿಯೂರಪ್ಪ ಅವರು ರಾಜಕೀಯ ಪ್ರವೇಶಿಸಿ 50 ವರ್ಷ ತುಂಬಿದ ಹಿನ್ನಲೆಯಲ್ಲಿ ಸಂಸದ ಗೋವಿಂದ ಕಾರಜೋಳ ಅವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ಆಯೋಜಿ ಸಲಾಗಿದೆ. ಬೇಲೂರು ಕ್ಷೇತ್ರದಿಂದ ಸುಮಾರು 5,000 ಜನ ಭಾಗವಹಿಸಲಿದ್ದಾರೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

‘ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ವಿವಿಧ ರಾಜ್ಯಗಳ ನಾಯಕರು ಹಾಗೂ ಮಠಾಧೀಶರು ಭಾಗವಹಿಸಲಿದ್ದಾರೆ’ ಎಂದು ತಿಳಿಸಿದರು.

‘ಯಡಿಯೂರಪ್ಪ ಅವರು ತಮ್ಮ ಅಧಿಕಾರದ ಅವಧಿಯಲ್ಲಿ ರೈತರ ಬದುಕು ಸುಧಾರಣೆಗೆ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ’ ಎಂದು ಶ್ಲಾಘಿಸಿದರು.

ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ಕೌರಿಸಂಜಯ್, ಮುಖಂಡರಾದ ಜಿ.ಕೆ. ಕುಮಾರ್, ನವೀನ್, ಸುಮನ್, ಜಗದೀಶ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260506-36-1234125701

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.