ಬೆಳಗಾವಿ: ಜಿಲ್ಲೆಯ ಸವದತ್ತಿ ರೇಣುಕಾ ಯಲ್ಲಮ್ಮದೇವಿ ಹಾಗೂ ಜೋಗುಳಬಾವಿ ಸತ್ತೆಮ್ಮದೇವಿ ಮತ್ತು ರಾಯಬಾಗದ ಚಿಂಚಲಿ ಮಾಯಕ್ಕದೇವಿ ದೇವಸ್ಥಾನಗಳಲ್ಲಿ ಸಾರ್ವಜನಿಕ ದರ್ಶನ ನಿಷೇಧವನ್ನು ಜುಲೈ 31ರವರೆಗೆ ವಿಸ್ತರಿಸಿ ಜಿಲ್ಲಾಧಿಕಾರಿ ಡಾ.ಎಸ್.ಬಿ. ಬೊಮ್ಮನಹಳ್ಳಿ ಆದೇಶ ಹೊರಡಿಸಿದ್ದಾರೆ.

‘ಕೊರೊನಾ ಸೋಂಕು ಹರಡದಂತೆ ನೋಡಿಕೊಳ್ಳಲು ಮತ್ತು ಭಕ್ತರು ಹಾಗೂ ಸಾರ್ವಜನಿಕರ ಆರೋಗ್ಯ ರಕ್ಷಣೆಯ ದೃಷ್ಟಿಯಿಂದ ಈ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ. ಈ ದೇವಸ್ಥಾನಗಳ ಆಡಳಿತ ಮಂಡಳಿಯವರು ನಿತ್ಯದ ಧಾರ್ಮಿಕ ವಿಧಿ ವಿಧಾನಗಳನ್ನು ಮುಂಜಾಗ್ರತಾ ಕ್ರಮ ವಹಿಸಿ ನಡೆಸಲು ಷರತ್ತು ವಿಧಿಸಿ ವಿನಾಯಿತಿ ನೀಡಲಾಗಿದೆ’ ಎಂದು ಆದೇಶದಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.