ಬೆಂಗಳೂರು: ತಮ್ಮ ಮಗ ಎಂಎಲ್ಸಿ ಯತೀಂದ್ರ ಜೊತೆ ಸಿದ್ದರಾಮಯ್ಯನವರು ರಾಹುಲ್ ಗಾಂಧಿಯನ್ನು ಭೇಟಿ ಮಾಡಿದ್ದರಲ್ಲಿ ತಪ್ಪೇನಿದೆ ಎಂದು ಕಾಂಗ್ರೆಸ್ ನಾಯಕ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ.

ಪಕ್ಷದ ನಾಯಕರು ಮತ್ತು ಕಾರ್ಯಕರ್ತರು ಕೇಂದ್ರ ನಾಯಕರನ್ನು ಭೇಟಿಯಾಗುವುದು ಸಾಮಾನ್ಯ ಎಂದಿದ್ದಾರೆ.

ಈ ಕುರಿತಂತೆ ಎಎನ್ಐ ಜೊತೆ ಮಾತನಾಡಿದ ಖರ್ಗೆ, ಯತೀಂದ್ರ ಸಿದ್ದರಾಮಯ್ಯ ಅವರು ರಾಹುಲ್ ಗಾಂಧಿಯನ್ನು ಭೇಟಿಯಾದ ಬಗ್ಗೆ ಎದ್ದಿರುವ ಊಹಾಪೋಹಗಳನ್ನು ಅಲ್ಲಗಳೆದಿದ್ದಾರೆ. ಸರ್ಕಾರ ರಚನೆ ಮತ್ತು ಸಂಪುಟದ ಬಗ್ಗೆ ಹೈಕಮಾಂಡ್ ಕೈಗೊಳ್ಳುವ ಯಾವುದೇ ನಿರ್ಧಾರಕ್ಕೆ ನಾವು ಬದ್ಧರಾಗಿರುತ್ತೇವೆ ಎಂದಿದ್ದಾರೆ.

ಯತೀಂದ್ರಗೆ ಸಂಪುಟದಲ್ಲಿ ಅವಕಾಶ ಸಿಗುವ ಸಾಧ್ಯತೆ ಇದೆ ಎಂದು ಕಾಂಗ್ರೆಸ್ ನಾಯಕಿ ಬಿಲ್ಕಿಸ್ ಬಾನು ನೀಡಿದ್ದ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ಪಕ್ಷದ ಹೈಕಮಾಂಡ್ ಅದನ್ನು ನಿರ್ಧರಿಸಲಿದೆ ಎಂದಿದ್ದಾರೆ.

ಯತೀಂದ್ರ ಸಂಪುಟ ಸೇರ್ಪಡೆ ಬಗ್ಗೆ ಹೈಕಮಾಂಡ್ ನಿರ್ಧಾರ ಕೈಗೊಳ್ಳುತ್ತದೆ. ಯುವಕರ ಬೇಡಿಕೆ ಕೂಡ ಅದೇ ಆಗಿದೆ. ಹೈಮಾಂಡ್ ನಿರ್ಧರಿಸಿದರೆ ಅವರು ಸಂಪುಟ ಸೇರುತ್ತಾರೆ ಎಂದಿದ್ದಾರೆ.

ಶುಕ್ರವಾರ ಮಗ ಯತೀಂದ್ರನ ಜೊತೆ ದೆಹಲಿಗೆ ತೆರಳಿದ್ದ ಸಿದ್ದರಾಮಯ್ಯ, ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಅವರನ್ನು ಬೇಟಿ ಮಾಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.