ತಿ.ನರಸೀಪುರ: ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಅವರಿಗೆ ಉಪಮುಖ್ಯಮಂತ್ರಿ ಸ್ಥಾನದ ಜೊತೆಗೆ ಜಿಲ್ಲಾ ಉಸ್ತುವಾರಿ ಹೊಣೆ ನೀಡುವಂತೆ ವರುಣಾ ಹಾಗೂ ತಗಡೂರು ಬ್ಲಾಕ್ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಪಕ್ಷದ ವರಿಷ್ಠರನ್ನು ಒತ್ತಾಯಿಸಿದ್ದಾರೆ.

ಭಾನುವಾರ ನಡೆದ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ತಗಡೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಂಗಸ್ವಾಮಿ ಮಾತನಾಡಿ, ‘ಅಹಿಂದ ವರ್ಗಗಳ ಆಶೋತ್ತರಗಳಿಗೆ ಸ್ಪಂದಿಸುವ ನಾಯಕನಾಗಿ ಯತೀಂದ್ರ ಸಿದ್ದರಾಮಯ್ಯ ಗುರುತಿಸಿಕೊಂಡಿದ್ದಾರೆ. ಹೊಸ ಸರ್ಕಾರದಲ್ಲಿ ನನಗೆ ಅಥವಾ ಮಗನಿಗೆ ಯಾವುದೇ ಸ್ಥಾನ ಬೇಡವೆಂದು ಹೇಳಿರುವುದು ಅವರ ದೊಡ್ಡತನ. ಆದರೆ ರಾಜ್ಯದ ವಿವಿಧ ಭಾಗಗಳಲ್ಲಿ ಪಕ್ಷದ ಕಾರ್ಯಕರ್ತರೊಂದಿಗೆ ನಿರಂತರ ಸಂಪರ್ಕದಲ್ಲಿರುವ ಯತೀಂದ್ರ ಅವರು ಪಕ್ಷ ಸಂಘಟನೆ ಮಾಡುವಲ್ಲಿ ಶ್ರಮಿಸುತ್ತಿದ್ದಾರೆ. ಅವರ ಸೇವೆ ಗುರುತಿಸಿ ಸ್ಥಾನ ಮಾನ ನೀಡಿದರೆ ಕಾರ್ಯಕರ್ತರ ಉತ್ಸಾಹ ಹೆಚ್ಚಲಿದೆ. ನಾವು ಕೂಡ ನಿಯೋಗದಲ್ಲಿ ತೆರಳಿ ಸಿದ್ದರಾಮಯ್ಯ ನವರ ಮೇಲೆ ಒತ್ತಡ ಹಾಕಿ ಯತೀಂದ್ರ ಅವರನ್ನು ಡಿಸಿಎಂ ಮಾಡಲು ಒತ್ತಾಯಿಸುತ್ತೇವೆ’ ಎಂದು ತಿಳಿಸಿದರು.

ತಿ.ನರಸೀಪುರ ಪುರಸಭೆ ಮಾಜಿ ಅಧ್ಯಕ್ಷ ಎನ್.ಸೋಮು, ಪ್ರಶಾಂತ್ ಬಾಬು, ಸಿದ್ದರಾಮನಹುಂಡಿ ಕುಮಾರ್ ಸೇರಿದಂತೆ ಹಲವು ಮುಖಂಡರು, ಮಾತನಾಡಿ, ‘ಯತೀಂದ್ರ ಸಿದ್ದರಾಮಯ್ಯ ಅವರು, ವರುಣಾ ಕ್ಷೇತ್ರ ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಯುವಕರು, ರೈತರು, ಮಹಿಳೆಯರು ಹಾಗೂ ಹಿಂದುಳಿದ ವರ್ಗಗಳ ಸಮಸ್ಯೆಗಳಿಗೆ ಸ್ಪಂದಿಸುತ್ತಿರುವ ಯತೀಂದ್ರ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಪಕ್ಷದ ಯುವ ನಾಯಕತ್ವದ ಪ್ರಮುಖ ಮುಖವಾಗಿ ಹೊರಹೊಮ್ಮಿದ್ದಾರೆ. ಅವರ ಸಂಘಟನಾ ಸಾಮರ್ಥ್ಯ, ಸರಳ ವ್ಯಕ್ತಿತ್ವ ಮತ್ತು ಜನಪರ ಕಾಳಜಿಯನ್ನು ಪರಿಗಣಿಸಿ ಅವರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಬೇಕು’ ಎಂದು ಆಗ್ರಹಿಸಿದರು.

‘ಹೈಕಮಾಂಡ್ ಸೂಚಿಸುತ್ತಿದ್ದಂತೆ, ಯಾವುದೇ ಗೊಂದಲಕ್ಕೆ ಅವಕಾಶ ನೀಡದೇ ಶಿಸ್ತಿನ ಸಿಪಾಯಿಯಂತೆ ರಾಜೀನಾಮೆ ಸಲ್ಲಿಸಿ ಹೊರನಡೆದ ಸಿದ್ದರಾಮಯ್ಯ ಅವರ ನಡೆ ನಿಜಕ್ಕೂ ಶ್ಲಾಘನೀಯ. ಹೈಕಮಾಂಡ್ ಕೂಡ ಮುಂದಿನ ದಿನಗಳಲ್ಲಿ ಸಿದ್ದರಾಮಯ್ಯ ಅವರನ್ನು ಗೌರವಯುತವಾಗಿ ನಡೆಸಿಕೊಳ್ಳಬೇಕು, ರಾಷ್ಟ್ರೀಯ ಮಟ್ಟದಲ್ಲಿ ಅವರಿಗೆ ಉನ್ನತ ಸ್ಥಾನ ನೀಡಿ ಗೌರವ ನೀಡಬೇಕು’ ಎಂದು ಹೇಳಿದರು

ಸಭೆಯಲ್ಲಿ ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷ ಕೆಂಪಯ್ಯನಹುಂಡಿ ಮಹಾದೇವಣ್ಣ, ಮಹದೇಶ್ವರ ಬೆಟ್ಟದ ಧರ್ಮದರ್ಶಿ ಭಾಗ್ಯಮ್ಮ, ಎಂ.ಸಿ ಹುಂಡಿ ಶಿವಪ್ರಸಾದ್, ಹಾರೋಪುರ ಶಿವಣ್ಣ, ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ರಾಯರ ಹುಂಡಿ ರವಿ, ಎನ್. ಅನಿಲ್ ಕುಮಾರ್, ರಘು, ಸೋಮಸುಂದರ, ಅಹಿಂದ ಜವರಪ್ಪ, ರಮೇಶ್, ನಟರಾಜು, ಅಮ್ಜದ್ ಖಾನ್, ಕೃಷ್ಣಮೂರ್ತಿ, ಮೋಸಿನ್ ಖಾನ್, ಎರಡು ಬ್ಲಾಕ್ ಗಳ ಅಧ್ಯಕ್ಷರು ಸದಸ್ಯರು ಮುಖಂಡರು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260601-38-682634110

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.