ಮದ್ದೂರು: ಮಾ.23ರಂದು ನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಹಾಗೂ ಮಾಜಿ ಸಂಸದ ಅನಂತ್ ಕುಮಾರ್ ಹೆಗ್ಡೆ ವಿರುದ್ಧ ಪೊಲೀಸರು ಸುಮೊಟೊ ಪ್ರಕರಣ ದಾಖಲು ಮಾಡಿರುವುದು ಖಂಡನೀಯ ಎಂದು ವಿಶ್ವ ಹಿಂದೂ ಪರಿಷತ್ ತಾಲ್ಲೂಕು ಕಾರ್ಯದರ್ಶಿ ವೀರಭದ್ರಸ್ವಾಮಿ ತಿಳಿಸಿದರು.

ಬಲಿದಾನ್ ದಿವಸ್ ಕಾರ್ಯಕ್ರಮವನ್ನು ಅತ್ಯಂತ ಅರ್ಥಪೂರ್ಣವಾಗಿ ಆಚರಿಸಿದ್ದು, ಹಿಂದೂಗಳು ಒಗ್ಗೂಡುವುದರ ಜತೆಗೆ ರಾಷ್ಟ್ರೀಯತೆ, ದೇಶಪ್ರೇಮ, ಸಾಮರಸ್ಯದ ಅಂಗವಾಗಿ ಸಂತಾಪ ಸೂಚಿಸಲು ಕಾರ್ಯಕ್ರಮ ಆಯೋಜಿಸಲಾಗಿತ್ತು. ಪ್ರಚೋದನಕಾರಿ ಭಾಷಣದ ಆರೋಪದ ಮೇರೆಗೆ ಮುಖಂಡರ ವಿರುದ್ಧ ಪೊಲೀಸರು ಸುಮೊಟೊ ಪ್ರಕರಣ ದಾಖಲಿಸಿ ರಾಜ್ಯ ಸರ್ಕಾರದ ಕೈಗೊಂಬೆಯಂತೆ ವರ್ತಿಸಿದ್ದಾರೆ’ ಎಂದು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದರು.

ಹಿಂದೂ ಪರ ಸಂಘಟನೆಯ ವಕ್ತಾರ ಜಗನ್ನಾಥ್ ಮಾತನಾಡಿ, ‘ಕಾರ್ಯಕ್ರಮ ಆಯೋಜನೆಗೂ ಮುನ್ನ ಫ್ಲೆಕ್ಸ್ ಅಳವಡಿಕೆಗೆ ಅನುಮತಿ ಪಡೆಯಲಾಗಿತ್ತು, ಆದರೆ ಕಾರ್ಯಕ್ರಮ ಮುಗಿದ ಕೆಲ ಗಂಟೆಗಳಲ್ಲೇ ಅವುಗಳನ್ನು ತೆರವು ಮಾಡಿರುವ ಕ್ರಮ ಸರಿಯಲ್ಲ’ ಎಂದು ಬೇಸರ ವ್ಯಕ್ತಪಡಿಸಿದರು.

‘ಇದೇ ರೀತಿ ಮುಂದುವರೆದರೆ ಮುಂದಿನ ದಿನಗಳಲ್ಲಿ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಉಗ್ರ ಹೋರಾಟ ರೂಪಿಸಲಾಗುವುದು’ ಎಂದು ಎಚ್ಚರಿಕೆ ನೀಡಿದರು.

‘ಇವರಿಬ್ಬರ ವಿರುದ್ಧ ದಾಖಲಾ ಗಿರುವ ಪ್ರಕರಣವನ್ನು ಕೂಡಲೇ ಹಿಂಪಡೆ ಯಬೇಕು’ ಎಂದು ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಹಿಂದೂ ಸೇನೆಯ ಹೆಮ್ಮನಹಳ್ಳಿ ಗಿರೀಶ್, ಮುಖಂಡ ಅನಿಲ್ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260327-40-1431992701

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.