ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಒಳಸಂಚಿನಿಂದ ಯತ್ನಾಳಗೆ ವಿರೋಧ ಪಕ್ಷದ ನಾಯಕನ ಸ್ಥಾನ ತಪ್ಪಿದೆ: ಮೃತ್ಯುಂಜಯ ಸ್ವಾಮಿ

Published 18 ನವೆಂಬರ್ 2023, 11:11 IST
Last Updated 18 ನವೆಂಬರ್ 2023, 11:11 IST
ಅಕ್ಷರ ಗಾತ್ರ

ವಿಜಯಪುರ: ಪಂಚಮಸಾಲಿ ಮೀಸಲಾತಿ ಹೋರಾಟಕ್ಕೆ ಅಸಹಕಾರ ತೋರಿದ ಮನಸ್ಸುಗಳ ಒಳಸಂಚು ಮತ್ತು ಕುತಂತ್ರದಿಂದ ಬಸನಗೌಡ ಪಾಟೀಲ ಯತ್ನಾಳ ಅವರಿಗೆ ವಿರೋಧ ಪಕ್ಷದ ಸ್ಥಾನ ಕೈತಪ್ಪಿದೆ ಎಂದು ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಆರೋಪಿಸಿದರು.

ನಗರದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಪತ್ರಕರ್ತರ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಯತ್ನಾಳ ಅವರಿಗೆ ವಿರೋಧ ಪಕ್ಷದ ನಾಯಕ ಸ್ಥಾನ ನೀಡಬೇಕು ಎಂದು ಸಮಾಜ ಕೇಳಿರಲಿಲ್ಲ. ಬಿಜೆಪಿಯಲ್ಲಿ ಯತ್ನಾಳ ಅವರಷ್ಟು ಜನಪ್ರಿಯ ನಾಯಕ ಸದ್ಯ ಯಾರೂ ಇರಲಿಲ್ಲ. ರಾಜ್ಯದ ಬಹುತೇಕ ಜನ ಯತ್ನಾಳ ವಿರೋಧ ಪಕ್ಷದ ನಾಯಕ ಆಗುತ್ತಾರೆ ಎಂಬ ಅಪೇಕ್ಷೆ ಪಟ್ಟಿದ್ದರು. ಆದರೆ, ಒಳಸಂಚಿನಿಂದಾಗಿ ಅವರಿಗೆ ಕೊನೇ ಗಳಿಗೆಯಲ್ಲಿ ಅನ್ಯಾಯವಾಗಿದೆ ಎಂದರು.

ಯತ್ನಾಳ ಅವರಿಗೆ ಅನ್ಯಾಯ ಆಗಿರುವುದರಿಂದ ಸಮಾಜದಲ್ಲಿ ದೊಡ್ಡ ಅಸಮಾದಾನ ಉಂಟಾಗಿದೆ. ಸಮಾಜದವರು ಸೇರಿದಂತೆ ಉತ್ತರ ಕರ್ನಾಟಕದವರು ಈ ಬಗ್ಗೆ ವಿರೋಧ ವ್ಯಕ್ತಪಡಿಸಬೇಕು ಎಂದು ಕರೆ ನೀಡಿದರು.

ಉತ್ತರ ಕರ್ನಾಟಕ ಭಾಗದ ಲಿಂಗಾಯತ ನಾಯಕರನ್ನು ಅದರಲ್ಲೂ ವಿಶೇಷವಾಗಿ ಪಂಚಮಸಾಲಿ ಮೀಸಲಾತಿ ಹೋರಾಟದ ಮುಂಚೂಣಿಯಲ್ಲಿ ಇದ್ದರವನ್ನು ಬಿಜೆಪಿ ಮತ್ತು ಕಾಂಗ್ರೆಸ್‌ ಕಡೆಗಣಿಸುತ್ತಾ ಬಂದಿವೆ ಎಂದು ದೂರಿದರು.

ಸರ್ಕಾರಕ್ಕೆ ಗಡುವು

ಬೆಳಗಾವಿಯಲ್ಲಿ ಡಿಸೆಂಬರ್‌ನಲ್ಲಿ ನಡೆಯಲಿರುವ ವಿಧಾನಸಭಾ ಅಧಿವೇಶನಕ್ಕೂ ಮೊದಲು ರಾಜ್ಯ ಸರ್ಕಾರ ಪಂಚಮಸಾಲಿ ಮೀಸಲಾತಿ ಹೋರಾಟಗಾರರು, ನಾಯಕರ ಜೊತೆ ಮಾತುಕತೆ ನಡೆಸಿ, ಇರುವಂತ ಕಾನೂನು ಅಡೆತಡೆಯನ್ನು ನಿವಾರಿಸಿ, ನ್ಯಾಯ ಕೊಡಿಸುವ ಭರವಸೆ ನೀಡಬೇಕು ಎಂದು ಆಗ್ರಹಿಸಿದರು.

ಸರ್ಕಾರ ಯಾವುದೇ ಸ್ಪಂದನೆ ನೀಡದೇ ಇದ್ದರೇ ವಿಧಾನಸೌಧದ ಆವರಣದಲ್ಲಿ ಇಷ್ಟಲಿಂಗ ಪೂಜೆ ಸಲ್ಲಿಸುವ ಮೂಲಕ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಲೋಕಸಭಾ ಚುನಾವಣೆ ಒಳಗಾಗಿ ಪಂಚಮಸಾಲಿ ಸಮಾಜಕ್ಕೆ ರಾಜ್ಯ ಸರ್ಕಾರ 2 ‘ಎ’ ಮೀಸಲಾತಿ ಕಲ್ಪಿಸಬೇಕು ಹಾಗೂ ಎಲ್ಲ ಲಿಂಗಾಯತರನ್ನು ಕೇಂದ್ರದ ಒಬಿಸಿ ಮೀಸಲಾತಿ ಪಟ್ಟಿಗೆ ಸೇರಿಸಲು ಶಿಫಾರಸು ಮಾಡಬೇಕು ಎಂದು ಆಗ್ರಹಿಸಿದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT