ಹಾಸನ: ಜನಸೇವೆಯಲ್ಲಿ 50 ಸಾರ್ಥಕ ವರ್ಷ ಪೂರೈಸಿದ ಹಿರಿಯ ನಾಯಕ ಬಿ.ಎಸ್. ಯಡಿಯೂರಪ್ಪ ಅವರ ಅಭಿಮಾನೋತ್ಸವವನ್ನು ಮೇ 9ರಂದು ಚಿತ್ರದುರ್ಗದಲ್ಲಿ ಅದ್ಧೂರಿಯಾಗಿ ಆಯೋಜಿಸಲಾಗಿದೆ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸಿದ್ದೇಶ್ ನಾಗೇಂದ್ರ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಸಮಾರಂಭವನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಉದ್ಘಾಟಿಸಲಿದ್ದು, ದೇಶದ ಪ್ರಮುಖ ರಾಜಕೀಯ ನಾಯಕರು ಭಾಗವಹಿಸಲಿದ್ದಾರೆ. ಬಿ.ಎಸ್. ಯಡಿಯೂರಪ್ಪ ಅವರಿಗೆ ವಿಶೇಷವಾಗಿ ಅಭಿನಂದನೆ ಸಲ್ಲಿಸಲಾಗುವುದು ಎಂದರು.

ಅಧ್ಯಕ್ಷತೆಯನ್ನು ಸಂಸದ ಗೋವಿಂದ ಕಾರಜೋಳ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ಎಚ್.ಡಿ. ಕುಮಾರಸ್ವಾಮಿ, ಶೋಭಾ ಕರಂದ್ಲಾಜೆ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಭಾಗವಹಿಸಲಿದ್ದಾರೆ ಎಂದರು.

ಮಾಜಿ ಮುಖ್ಯಮಂತ್ರಿಗಳಾದ ಡಿ.ವಿ. ಸದಾನಂದ ಗೌಡ, ಜಗದೀಶ್ ಶೆಟ್ಟರ್, ಬಸವರಾಜ ಬೊಮ್ಮಾಯಿ, ಕೇಂದ್ರ ರಾಜ್ಯ ಸಚಿವ ವಿ. ಸೋಮಣ್ಣ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಚಲವಾದಿ ನಾರಾಯಣಸ್ವಾಮಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿರುವರು ಎಂದು ತಿಳಿಸಿದರು.

ಈ ಅಭಿಮಾನೋತ್ಸವಕ್ಕೆ ಹಾಸನ ಜಿಲ್ಲೆಯಿಂದ ಸುಮಾರು 25 ಸಾವಿರಕ್ಕೂ ಹೆಚ್ಚು ಅಭಿಮಾನಿಗಳು ಭಾಗವಹಿಸುವ ನಿರೀಕ್ಷೆ ಇದೆ ಎಂದು ತಿಳಿಸಿದರು.

ಅಮಿತ್ ಶೆಟ್ಟಿ, ನಾರಾಯಣ ಗೌಡ, ರಮೇಶ್, ಯೋಗೇಶ್ ಗೌಡ, ಅಶೋಕ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260507-36-872240496

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.