ಬೆಂಗಳೂರು: ‘ಬಿ.ಎಸ್.ಯಡಿಯೂರಪ್ಪ ಅವರು ರಾಜಕೀಯಕ್ಕೆ ಕಾಲಿಟ್ಟು 50 ವರ್ಷ ತುಂಬಿರುವ ಸಂಭ್ರಮದಲ್ಲಿ ಮೇ 9ರಂದು ಚಿತ್ರದುರ್ಗದಲ್ಲಿ ‘ಯಡಿಯೂರಪ್ಪ ಅಭಿಮಾನೋತ್ಸವ’ ಆಯೋಜಿಸಲಾಗಿದೆ’ ಎಂದು ಬಿಜೆಪಿ ಸಂಸದ ಗೋವಿಂದ ಕಾರಜೋಳ ತಿಳಿಸಿದರು.

ಗುರುವಾರ ಸುದ್ದಿಗೋಷ್ಠಿ ಯಲ್ಲಿ ಮಾತನಾಡಿದ ಅವರು, ‘ಯಡಿಯೂರಪ್ಪ ಅವರು ರಾಜ್ಯದ ರೈತರು, ಬಡವರು, ದಲಿತರ ಪರವಾಗಿ ಹೋರಾಡಿದ್ದಾರೆ. ಸಾಮಾಜಿಕ ನ್ಯಾಯಕ್ಕಾಗಿ ದುಡಿದಿದ್ದಾರೆ. ಅವರ ಈ 50 ವರ್ಷಗಳ ಸಾರ್ಥಕ ರಾಜಕೀಯ ಜೀವನಕ್ಕೆ ಗೌರವ ಸಲ್ಲಿಸುವ ಸಲುವಾಗಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ’ ಎಂದರು.

‘ಚಿತ್ರದುರ್ಗದಲ್ಲಿ ಕಾರ್ಯ ಕ್ರಮವನ್ನು ಆಯೋಜಿಸಲಾಗುತ್ತಿದೆ. ಇದಕ್ಕಾಗಿ ಏಪ್ರಿಲ್ 26ರಿಂದ ಸಿದ್ಧತಾಕಾರ್ಯಗಳುಆರಂಭವಾಗಲಿವೆ. ಮೇ 8ರಂದು ಯಡಿಯೂರಪ್ಪ ಅವರ ಪುರಪ್ರವೇಶ ನಡೆಯಲಿದೆ. 9ರಂದು ನಡೆಯಲಿರುವ ಅಭಿಮಾನೋತ್ಸವ ದಲ್ಲಿ ವಿವಿಧ ಮಠಗಳ ಮಠಾಧೀಶರು, ರಾಜಕೀಯ ನಾಯಕರು ಸೇರಿ 10 ಲಕ್ಷಕ್ಕೂ ಹೆಚ್ಚು ಜನರು ಭಾಗವಹಿಸುವ ನಿರೀಕ್ಷೆ ಇದೆ’ ಎಂದರು.

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ‘ಚಿತ್ರದುರ್ಗವು ಕರ್ನಾಟಕದ ಕೇಂದ್ರಬಿಂದು. ಹೀಗಾಗಿ ಕಾರ್ಯಕ್ರಮ ಆಯೋಜನೆಗೆ ಆ ಊರನ್ನೆ ಆಯ್ಕೆ ಮಾಡಿಕೊಳ್ಳಲಾಯಿತು. ರಾಜ್ಯದ ಮೂಲೆ–ಮೂಲೆಯಿಂದಲೂ ಯಡಿಯೂರಪ್ಪ ಅವರ ಅಭಿಮಾನಿಗಳು ಕಾರ್ಯಕ್ರಮಕ್ಕೆ ಬರಲಿದ್ದಾರೆ’ ಎಂದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260424-51-1872993838

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.