ಕೂಡ್ಲಿಗಿ: ‘ಪಕ್ಷ ಬೇರೆಯಲ್ಲ, ಯಡಿಯೂರಪ್ಪ ಅವರು ಬೇರೆಯಲ್ಲ. ಚಿತ್ರದುರ್ಗದಲ್ಲಿ ನಡೆಯುವ ಕಾರ್ಯಕ್ರಮ ಯಡಿಯೂರಪ್ಪ ಅವರ ಅಭಿಮಾನೋತ್ಸವವೂ ಹೌದು, ಪಕ್ಷದ ಕಾರ್ಯಕ್ರಮವೂ ಹೌದು’ ಎಂದು ಅಭಿಮಾನೋತ್ಸವ ಕಾರ್ಯಕ್ರಮದ ಕಾರ್ಯಾಧ್ಯಕ್ಷ ಶ್ರೀರಾಮುಲು ಹೇಳಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಗುರುವಾರ ಅಭಿಮಾನೋತ್ಸವ ಕಾರ್ಯಕ್ರಮದ ಪೋಸ್ಟರ್ ಬಿಡುಗಡೆ ಮಾಡಿ ಮಾತನಾಡಿದರು.

‘ಮೇ 8ರಂದು ಯಡಿಯೂರಪ್ಪ ಅವರ ಪುರಪ್ರವೇಶ ನಡೆಯಲಿದ್ದು, ದಸರಾ ಮಾದರಿಯಲ್ಲಿ ಕಲಾ ತಂಡಗಳೊಂದಿಗೆ ಮೆರವಣಿಗೆ ನಡೆಸಲಾಗುವುದು. 9ರಂದು ನಡೆಯುವ ಅಭಿಮಾನೋತ್ಸವ ಕಾರ್ಯಕ್ರಮದಲ್ಲಿ 10 ಲಕ್ಷಕ್ಕೂ ಹೆಚ್ಚು ಜನ ಸೇರುವವರು’ ಎಂದು ಮಾಹಿತಿ ನೀಡಿದರು.

‘ಕೂಡ್ಲಿಗಿ ಭಾಗದಲ್ಲಿ ಯಡಿಯೂರಪ್ಪ ಅವರು 74 ಕರೆಗಳನ್ನು ತುಂಬಿಸುವ ಯೋಜನೆ ಜಾರಿಗೊಳಿಸಿದರು. ಈ ಭಾಗದಿಂದ ಸ್ವಯಂಪ್ರೇರಿತವಾಗಿ ಅನೇಕ ಅಭಿಮಾನಿಗಳು ಕಾರ್ಯಕ್ರಮಕ್ಕೆ ಬರಲು ಮುಂದಾಗಿದ್ದು, 15 ಸಾವಿರ ಜನ ಭಾಗಿಯಾಗುವ ನಿರೀಕ್ಷೆ ಇದೆ’ ಎಂದರು.

‘ರಾಜ್ಯದಲ್ಲಿ ಯಡಿಯೂರಪ್ಪ ಅವರು ಆಡಳಿತ ನಡೆಸುವಾಗ ಸರ್ವರಿಗೂ ಸಾಮಾಜಿಕ ನ್ಯಾಯ ಒದಗಿಸಿದ್ದರು. ಈ ಕಾರ್ಯಕ್ರಮವು ಒಗ್ಗಟ್ಟಿನ ವೇದಿಕೆಯಾಗಲಿದ್ದು, ಯಡಿಯೂರಪ್ಪ ಅವರಿಗೆ ಸನ್ಮಾನ ಮಾಡುವ ಜೊತೆಗೆ 2028ರ ವಿಧಾನಸಭಾ ಚುನಾವಣೆಗೆ ಕಾರ್ಯಕರ್ತರನ್ನು ಸಿದ್ದಗೊಳಿಸುವ ಉದ್ದೇಶವಿದೆ’ ಎಂದು ಅವರು ಹೇಳಿದರು.

ಪಕ್ಷದ ಮಂಡಲ ಅಧ್ಯಕ್ಷ ಕೆ. ನಾಗರಾಜ, ಮುಖಂಡರಾದ ಚಂದ್ರಮೌಳಿ, ಪವಿತ್ರ, ಲಕ್ಷ್ಮೀ ಬಾಯಿ, ವೆಂಕಟೇಶ ನಾಯ್ಕ್, ನಾಗಭೂಷಣ, ಭರತ್, ರಾಘು, ಬಾಲಪ್ಪ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260508-25-49845558

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.