ಬೆಂಗಳೂರು: ಇಂದು ಸಂಜೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿರುವ 7 ಶಾಸಕರ ಹೆಸರನ್ನು ಮುಖ್ಯಮಂತ್ರಿಯಡಿಯೂರಪ್ಪ ಪ್ರಕಟಿಸಿದ್ದಾರೆ.

ಉಮೇಶ್ ಕತ್ತಿ, ಎಸ್. ಅಂಗಾರ, ಸಿ.ಪಿ. ಯೋಗೀಶ್ವರ್, ಅರವಿಂದ ಲಿಂಬಾವಳಿ, ಎಂಟಿಬಿ ನಾಗರಾಜ್, ಆರ್. ಶಂಕರ್, ಮುರುಗೇಶ್ ನಿರಾಣಿ ಅವರ ಹೆಸರುಗಳನ್ನು ರಾಜಭವನಕ್ಕೆ ಕಳುಹಿಸಲಾಗಿದ್ದು, ಸಂಜೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಮಾಧ್ಯಮಗಳಿಗೆ ಮುಖ್ಯಮಂತ್ರಿಯಡಿಯೂರಪ್ಪ ತಿಳಿಸಿದ್ದಾರೆ.

ಉಪಚುನಾವಣಾ ಪ್ರಚಾರದಲ್ಲಿ ಮುನಿರತ್ನ ಮುಂದಿನ ಮಂತ್ರಿ ಎಂದು ಪ್ರಚಾರ ಮಾಡಿದ್ದ ಸಿಎಂ ಯಡಿಯೂರಪ್ಪ ಇಂದು ಸಂಜೆ ಪ್ರಮಾಣವಚನ ಸ್ವೀಕರಿಸಲಿರುವ ಶಾಸಕರ ಪಟ್ಟಿಯಿಂದ ಅವರ ಹೆಸರನ್ನು ಕೈಬಿಟ್ಟಿದ್ದಾರೆ. ಮುನಿರತ್ನಗೆ ಸಚಿವ ಸ್ಥಾನದ ಬಗ್ಗೆ ಪತ್ರಕರ್ತರು ಪ್ರಶ್ನಿಸಿದಾಗ ಯಾವುದೇ ಉತ್ತರ ಕೊಡದೆ ಯಡಿಯೂರಪ್ಪ ಮುಂದೆ ನಡೆದಿದ್ದಾರೆ.

ಇದನ್ನೂ ಓದಿ: Live: ಸಚಿವ ಸಂಪುಟ ವಿಸ್ತರಣೆ- ಯೋಗೇಶ್ವರ್ಗೆ ಮಂತ್ರಿ ಸ್ಥಾನ ಏಕೆ? ವಿಶ್ವನಾಥ್ ಕಿಡಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.