ಬೆಳಗಾವಿ: ‘ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಬೆನ್ನಿಗೆ ಬಿಜೆಪಿಯವರೇ ಚೂರಿ ಹಾಕಿದ್ದಾರೆ’ ಎಂದು ಕೆಪಿಸಿಸಿ ವಕ್ತಾರೆಯೂ ಆಗಿರುವ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಹೇಳಿದರು.

ಇಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಶನಿವಾರ ಮಾತನಾಡಿದ ಅವರು, ‘ಕಾಂಗ್ರೆಸ್ ಪಕ್ಷದವರು ಚೂರಿ ಹಾಕಲು ಸಾಧ್ಯವೇ?’ ಎಂದು ಕೇಳಿದರು.

‘ಯಾರನ್ನು ಬೆಳೆಸಿದರೋ, ಯಾರನ್ನು ತಮ್ಮೊಂದಿಗೆ ಕರೆದುಕೊಂಡು ಹೋಗಿದ್ದರೋ ಅವರೇ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಲು ಪ್ರಯತ್ನಿಸಿದ್ದಾರೆ’ ಎಂದು ಆರೋಪಿಸಿದರು.

‘2019ರಲ್ಲಿ ನೆರೆ ಹಾಗೂ ಅತಿವೃಷ್ಟಿಯಿಂದ ಹಾನಿ ಅನುಭವಿಸಿದವರಿಗೆ ಪರಿಹಾರ ಸಿಕ್ಕಿಲ್ಲ. ಮುಖ್ಯಮಂತ್ರಿ, ಸಚಿವರಿಗೆ ಮನವಿ ಮಾಡಿದರೂ ಪರಿಹಾರದ ಹಣ ಬಿಡುಗಡೆ ಮಾಡಿಲ್ಲ. ಕೋವಿಡ್ ಜೊತೆಗೆ ಈಗ ಪ್ರವಾಹದ ಭೀತಿಯೂ ಎದುರಾಗಿದೆ. ಬಹಳ ಸಂಕಷ್ಟದ ದಿನಗಳು ಬಂದಿವೆ. ಜನರಿಗೆ ಹೇಗೆ ಸಾಂತ್ವನ ಹೇಳಬೇಕು ಎನ್ನುವುದು ತಿಳಿಯುತ್ತಿಲ್ಲ. ಸರ್ಕಾರವು ಕೋವಿಡ್ ಮತ್ತು ಪ್ರವಾಹ ನಿರ್ವಹಣೆಯಲ್ಲಿ ವಿಫಲವಾಗಿದೆ’ ಎಂದರು.

‘ಪ್ರವಾಹ ಬಾಧಿತ ಪ್ರದೇಶಗಳಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ನೇತೃತ್ವದಲ್ಲಿ ನಿಯೋಗ ತೆರಳಿ ಪರಿಶೀಲಿಸಿ, ವರದಿಯನ್ನು ಸರ್ಕಾರಕ್ಕೆ ಸಲ್ಲಿಸುತ್ತೇವೆ’ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.