ಬೆಂಗಳೂರು: ‘ಧಾರವಾಡದ ಬಿಜೆಪಿ ಮುಖಂಡ ಯೋಗೀಶ್ಗೌಡ ಗೌಡರ ಕೊಲೆ ಪ್ರಕರಣದಲ್ಲಿ ಸೆಷನ್ಸ್ ನ್ಯಾಯಾಲಯ ವಿಧಿಸಿರುವ ಜೀವಾವಧಿ ಶಿಕ್ಷೆ ರದ್ದುಪಡಿಸಬೇಕು’ ಎಂದು ಕೋರಿ ಮಾಜಿ ಶಾಸಕ ವಿನಯ ಕುಲಕರ್ಣಿ ಮತ್ತು ಚಂದ್ರಶೇಖರ ಇಂಡಿ ಸಲ್ಲಿಸಿರುವ ಕ್ರಿಮಿನಲ್ ಮೇಲ್ಮನವಿಗಳ ವಿಚಾರಣೆಯನ್ನು ಹೈಕೋರ್ಟ್ ಜೂನ್ 2ಕ್ಕೆ ಮುಂದೂಡಿದೆ.

‘ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶ ರದ್ದುಪಡಿಸಬೇಕು’ ಎಂದು ಕೋರಿ ವಿನಯ ಕುಲಕರ್ಣಿ ಹಾಗೂ ಚಂದ್ರಶೇಖರ ಇಂಡಿ ಸಲ್ಲಿಸಿರುವ ಪ್ರತ್ಯೇಕ ಮೇಲ್ಮನವಿಗಳನ್ನು ರಜಾಕಾಲದ ನ್ಯಾಯಪೀಠದ ನ್ಯಾಯಮೂರ್ತಿ ಎಸ್. ಸುನಿಲ್ ದತ್ ಯಾದವ್ ನೇತೃತ್ವದ ವಿಭಾಗೀಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ವಿನಯ ಕುಲಕರ್ಣಿ ಪರ ಸುಪ್ರೀಂ ಕೋರ್ಟ್ನ ಪದಾಂಕಿತ ಹಿರಿಯ ವಕೀಲ ಸಿದ್ಧಾರ್ಥ ಲೂಥ್ರಾ, ‘ಅರ್ಜಿದಾರರಿಗೆ ಶಿಕ್ಷೆ ವಿಧಿಸಿರುವ ಕಾರಣ ಅವರು ಶಾಸಕ ಸ್ಥಾನದಿಂದ ಅನರ್ಹಗೊಂಡಿದ್ದಾರೆ. ಸದ್ಯ ಖಾಲಿಯಿರುವ ಅವರ ಸ್ಥಾನಕ್ಕೆ ಮಧ್ಯಂತರ ಚುನಾವಣೆ ಘೋಷಣೆ ಮಾಡುವ ಸಾಧ್ಯತೆಯಿದೆ. ಹಾಗಾಗಿ, ಚುನಾವಣೆ ಘೋಷಣೆಗೆ ತಡೆ ನೀಡಬೇಕು’ ಎಂದು ನ್ಯಾಯಪೀಠಕ್ಕೆ ಮನವಿ ಮಾಡಿದರು.

ಇದಕ್ಕೆ ಸಿಬಿಐ ಪರ ವಕೀಲ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್.ವಿ.ರಾಜು ಮತ್ತು ಪಿ.ಪ್ರಸನ್ನಕುಮಾರ್, ‘ಆಕ್ಷೇಪಣೆ ಸಿದ್ಧವಿದ್ದು ಶೀಘ್ರವೇ ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು’ ಎಂದು ತಿಳಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ‘ಈ ಮೇಲ್ಮನವಿಗಳನ್ನು ರಜಾಕಾಲ ಮುಗಿದ ಬಳಿಕ ವಿಚಾರಣೆ ನಡೆಸಬಹುದು’ ಎಂದು ತಿಳಿಸಿತು. ಅಂತೆಯೇ, ಆಕ್ಷೇಪಣೆ ಸಲ್ಲಿಸಲು ಸಿಬಿಐಗೆ ಸೂಚಿಸಿ ವಿಚಾರಣೆಯನ್ನು ಜೂನ್ 2ಕ್ಕೆ ಮುಂದೂಡಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.