ನವದೆಹಲಿ: 2016ರ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಶರಣಾಗತಿಗೆ ಹೆಚ್ಚುವರಿ ಸಮಯಾವಕಾಶ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.

ವಿನಯ್ ಕುಲಕರ್ಣಿಗೆ ನೀಡಿದ್ದ ಜಾಮೀನನ್ನು ಕಳೆದ ಶುಕ್ರವಾರ ಸುಪ್ರೀಂ ಕೋರ್ಟ್ ರದ್ದು ಮಾಡಿತ್ತು.

‘ಪ್ರಕರಣದ ಸಾಕ್ಷಿಗಳನ್ನು ಸಂಪರ್ಕಿಸಲು ಹಾಗೂ ಅವರ ಮೇಲೆ ಪ್ರಭಾವ ಬೀರಲು ವಿನಯ ಕುಲಕರ್ಣಿ ಹಾಗೂ ಮತ್ತೊಬ್ಬ ಆರೋಪಿ ಪ್ರಯತ್ನಿಸಿದ್ದಾರೆ. ಇದು, ಷರತ್ತುಗಳ ಉಲ್ಲಂಘನೆಯಾಗಿರುವ ಕಾರಣ ಜಾಮೀನನ್ನು ರದ್ದುಪಡಿಸಲಾಗಿದೆ’ ಎಂದು ಸುಪ್ರೀಂ ಕೋರ್ಟ್ ಹೇಳಿತ್ತು.

ಸುಪ್ರೀಂ ಕೋರ್ಟ್ ಅಥವಾ ಹೈಕೋರ್ಟ್, ಆರೋಪಿಗೆ ಜಾಮೀನು ಮಂಜೂರು ಮಾಡಿದ್ದರೂ ವಿಚಾರಣಾ ನ್ಯಾಯಾಲಯವು ಜಾಮೀನನ್ನು ರದ್ದುಪಡಿಸಬಹುದು ಎಂದೂ ಪೀಠ ಹೇಳಿತ್ತು.

ಜಾಮೀನು ರದ್ದಾದ ಹಿನ್ನೆಲೆಯಲ್ಲಿ ವಿನಯ್ ಕುಲಕರ್ಣಿ ಇಂದು ನ್ಯಾಯಾಲಯಕ್ಕೆ ಶರಣಾಗಬೇಕಿತ್ತು. ಇದರ ಬೆನ್ನಲ್ಲೇ ಶರಣಾಗಲು ಸಮಾಯಾವಕಾಶ ಕೋರಿ ಅವರು ಕೋರ್ಟ್ಗೆ ಮನವಿ ಸಲ್ಲಿಸಿದ್ದರು.

ಕುಲಕರ್ಣಿ ಹಾಲಿ ಶಾಸಕ ಮತ್ತು ಕರ್ನಾಟಕ ನೀರು ಸರಬರಾಜು ಮಂಡಳಿಯ ಅಧ್ಯಕ್ಷರಾಗಿರುವುದರಿಂದ ಈ ವಾರ ನಿಗದಿಯಾಗಿರುವ ಸಭೆಯಲ್ಲಿ ಭಾಗವಹಿಸಬೇಕಾಗಿದೆ. ಹೀಗಾಗಿ, ಶರಣಾಗತಿಗೆ ಒಂದು ವಾರ ಕಾಲಾವಕಾಶ ನೀಡಬೇಕೆಂದು ಅವರ ಪರ ವಕೀಲರು ಮನವಿ ಸಲ್ಲಿಸಿದ್ದರು.

ಮನವಿ ತಿರಸ್ಕರಿಸಿದ ನ್ಯಾಯಮೂರ್ತಿಗಳಾದ ಪ್ರಶಾಂತ್ ಕುಮಾರ್ ಮಿಶ್ರಾ ಮತ್ತು ಮನಮೋಹನ್ ಅವರಿದ್ದ ಪೀಠ, ಇಲ್ಲ. ವಿನಂತಿಯನ್ನು ತಿರಸ್ಕರಿಸಲಾಗಿದೆ. ನ್ಯಾಯಾಲಯದ ಆದೇಶದ ಪ್ರಕಾರ ಶರಣಾಗತಿ ಆಗಲೇಬೇಕು ಎಂದು ತಿಳಿಸಿದೆ.

ಕುಲಕರ್ಣಿ ಸಾಕ್ಷಿಗಳನ್ನು ಸಂಪರ್ಕಿಸಲು ಅಥವಾ ಪರ್ಯಾಯವಾಗಿ ಅವರ ಮೇಲೆ ಪ್ರಭಾವ ಬೀರಲು ಪ್ರಯತ್ನಿಸಿದ್ದಾರೆ ಎಂಬುದಕ್ಕೆ ಸಾಕಷ್ಟು ದಾಖಲೆಗಳಿವೆ ಎಂದು ನ್ಯಾಯಪೀಠ ಹೇಳಿದೆ.

ಕಳೆದ ಶುಕ್ರವಾರದಿಂದ(ಜೂನ್ 06) ಒಂದು ವಾರದೊಳಗೆ ಸಂಬಂಧಪಟ್ಟ ವಿಚಾರಣಾ ನ್ಯಾಯಾಲಯ ಅಥವಾ ಜೈಲು ಅಧಿಕಾರಿಗಳ ಮುಂದೆ ಶರಣಾಗುವಂತೆ ಕುಲಕರ್ಣಿ ಅವರಿಗೆ ಸುಪ್ರೀಂ ಕೋರ್ಟ್ ಸೂಚಿಸಿತ್ತು.

2016ರ ಮೇ ತಿಂಗಳಲ್ಲಿ ಯೋಗೇಶ್ ಗೌಡ ಗೌಡರ ಅವರ ಕೊಲೆ ನಡೆದಿತ್ತು. ಸಾಕ್ಷಿಗಳ ಮೇಲೆ ಪ್ರಭಾವ ಬೀರಲು ಯತ್ನಿಸಿದ ಆರೋಪದ ಅಡಿಯಲ್ಲಿ ಚಂದ್ರಶೇಖರ ಇಂಡಿ ಅಲಿಯಾಸ್ ಚಂದು ಮಾಮಾ ಅವರಿಗೆ ನೀಡಿದ್ದ ಜಾಮೀನನ್ನು ವಿಚಾರಣಾ ನ್ಯಾಯಾಲಯ ರದ್ದುಗೊಳಿಸಿತ್ತು. ಆದರೆ ವಿನಯ ಕುಲಕರ್ಣಿ ಅವರಿಗೆ ನೀಡಿದ್ದ ಜಾಮೀನನ್ನು ರದ್ದುಗೊಳಿಸಲು ನಿರಾಕರಿಸಿತ್ತು. ವಿನಯ 2021ರ ಆಗಸ್ಟ್ 11ರಿಂದ ಜಾಮೀನಿನ ಮೇಲೆ ಹೊರಗಿದ್ದಾರೆ.
.ಯೋಗೀಶ್ಗೌಡ ಕೊಲೆ ಪ್ರಕರಣ: ಶಾಸಕ ವಿನಯ ಜಾಮೀನು ರದ್ದು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.