ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಯುವ ಕಾಂಗ್ರೆಸ್‌ನಿಂದ ಜಾಥಾ

Published 10 ಮಾರ್ಚ್ 2024, 15:58 IST
Last Updated 10 ಮಾರ್ಚ್ 2024, 15:58 IST
ಅಕ್ಷರ ಗಾತ್ರ

ಬೆಂಗಳೂರು: ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ವಿಧಾನಸೌಧ ಮುಂಭಾಗದಲ್ಲಿರುವ ಕೆಂಗಲ್ ಹನುಮಂತಯ್ಯ ಪ್ರತಿಮೆ ಬಳಿಯಿಂದ ಯುವ ಕಾಂಗ್ರೆಸ್ ವತಿಯಿಂದ ಭಾನುವಾರ ದ್ವಿಚಕ್ರ ಮತ್ತು ಕಾರು ವಾಹನ ಜಾಥಾ ಭಾನುವಾರ ನಡೆಯಿತು. ರಾಜ್ಯ ಯುವ ಕಾಂಗ್ರೆಸ್ ಕಾರ್ಯಾಧ್ಯಕ್ಷ ಎಚ್.ಎಸ್. ಮಂಜುನಾಥ್ ಗೌಡ ಅವರು ಜಾಥಾಕ್ಕೆ ಚಾಲನೆ ನೀಡಿದರು.

ಜಾಥಾವು ವಿಧಾನಸೌಧದಿಂದ ಚಾಲುಕ್ಯ ವೃತ್ತ, ಸ್ಯಾಂಕಿ ರಸ್ತೆ, ಮೇಖ್ರಿ ವೃತ್ತ, ಮತ್ತೆ ಚಾಲುಕ್ಯ ವೃತ್ತ, ಅರಮನೆ ರಸ್ತೆ, ಕೆ.ಆರ್. ವೃತ್ತ ಮಾರ್ಗವಾಗಿ ಕಂಠೀರವ ಕ್ರೀಡಾಂಗಣದಲ್ಲಿ ಮುಕ್ತಾಯವಾಯಿತು. ಸುಮಾರು 15 ಕಿಲೋ ಮೀಟರ್ ಜಾಥಾ ಸಾಗಿತು.

ಈ ಸಂದರ್ಭದಲ್ಲಿ ಮಾತನಾಡಿದ ಮಂಜುನಾಥ್ ಗೌಡ, ‘ಕಾಂಗ್ರೆಸ್ ಪಕ್ಷ ಮಹಿಳೆಯ ಪರವಿದ್ದು ಪಕ್ಷದಲ್ಲಿ ಮಹಿಳೆಯರಿಗೆ ಹೆಚ್ಚಿನ ಅವಕಾಶ ನೀಡುತ್ತಿದೆ. 16 ವರ್ಷ ಪ್ರಧಾನಿಯಾಗಿ ಇಂದಿರಾಗಾಂಧಿ ಅವರ ಆಡಳಿತ ಮತ್ತು ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಸೋನಿಯಾ ಗಾಂಧಿ ಅವರ ಕಾರ್ಯವೈಖರಿ ಮಹಿಳೆಯರಿಗೆ ಸ್ಫೂರ್ತಿಯಾಗಿದೆ. ರಾಜ್ಯ ಸರ್ಕಾರ ಜಾರಿಗೊಳಿಸಿದ ಐದು ಗ್ಯಾರಂಟಿ ಯೋಜನೆಗಳ ಲಾಭವನ್ನು ಮಹಿಳೆಯರೇ ಪಡೆದಿದ್ದಾರೆ’ ಎಂದರು.

‘ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಯುವ ಸಮೂಹದ ಪಾತ್ರ ದೊಡ್ಡದು. ರಾಜ್ಯದ ಎಲ್ಲ 28 ಲೋಕಸಭಾ ಕ್ಷೇತ್ರದಲ್ಲಿ ಪಕ್ಷ ಗೆಲುವು ಸಾಧಿಸುವಂತೆ ಯುವ ಸಂಘಟನೆಯನ್ನು ಬಲಪಡಿಸಲಾಗುವುದು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT