ಬೆಂಗಳೂರು: ಪದಾಧಿಕಾರಿಗಳನ್ನು ಜವಾಬ್ದಾರಿಗಳಿಂದ ತಾತ್ಕಾಲಿಕವಾಗಿ ಮುಕ್ತಗೊಳಿಸಿದ ವಿಚಾರಕ್ಕೆ ಯುವ ಕಾಂಗ್ರೆಸ್ ಅಧ್ಯಕ್ಷ ಎಚ್.ಎಸ್. ಮಂಜುನಾಥ ಗೌಡ ಮತ್ತು ಉಪಾಧ್ಯಕ್ಷೆ ದೀಪಿಕಾ ರೆಡ್ಡಿ ಬೆಂಬಲಿಗರ ನಡುವೆ ಸೋಮವಾರ ನಡೆದ ಗಲಾಟೆ ಕಾರಣಕ್ಕೆ ದೀಪಿಕಾ ರೆಡ್ಡಿ ಜತೆಗಿದ್ದ ಏಳು ಮಂದಿಗೆ ಶೋಕಾಸ್ ನೋಟಿಸ್ ನೀಡಲಾಗಿದೆ.

ಕೆಪಿಸಿಸಿ ಕಚೇರಿಯಲ್ಲಿ ಸೋಮವಾರ ನಡೆದ ಸಭೆಯಲ್ಲಿ ಮಂಜುನಾಥ ಗೌಡ ಮತ್ತು ದೀಪಿಕಾ ರೆಡ್ಡಿ ಬೆಂಬಲಿಗರ ನಡುವೆ ತಳ್ಳಾಟ-ನೂಕಾಟ ನಡೆದು ಕೈಕೈ ಮಿಲಾಯಿಸುವ ಹಂತ ತಲುಪಿತು. ಈ ಘಟನೆಯ ಬಗ್ಗೆ ವಾರದೊಳಗೆ ಉತ್ತರ ನೀಡುವಂತೆ ಯುವ ಕಾಂಗ್ರೆಸ್ನ ದೀಪಿಕಾ ರೆಡ್ಡಿ, ನಿಖಿಲ್ ಕೊಂಡಜ್ಜಿ, ಮಂಜು ಮಣಿ ಚೆಟ್ಟಿ, ಸಂದೀಪ್, ಗೋವರ್ಧನ್, ರವಿಕಿರಣ್ ಮತ್ತು ಯಶ್ ಗೌಡ ಅವರಿಗೆ ರಾಷ್ಟ್ರೀಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ನಿಗಂ ಭಂಡಾರಿ ನೋಟಿಸ್ ನೀಡಿದ್ದಾರೆ.

ಯುವ ಕಾಂಗ್ರೆಸ್ ಪದಾಧಿಕಾರಿಗಳ ನಡುವಿನ ಗಲಾಟೆಯನ್ನು ಗಂಭೀರವಾಗಿ ಪರಿಗಣಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಈ ಬಗ್ಗೆ ಪರಾಮರ್ಶೆ ನಡೆಸುವಂತೆ ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ. ಚಂದ್ರಶೇಖರ್ ಅವರಿಗೆ ಸೂಚನೆ ನೀಡಿದ್ದಾರೆ. ಅದರಂತೆ, ಗಲಾಟೆಯಲ್ಲಿ ಭಾಗಿಯಾದ ಪದಾಧಿಕಾರಿಗಳನ್ನು ಕರೆಯಿಸಿಕೊಂಡು ಚಂದ್ರಶೇಖರ್ ಚರ್ಚೆ ನಡೆಸಿದ್ದಾರೆ.

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಇದೇ 21ರಂದು ನಡೆಸಲು ಉದ್ದೇಶಿಸಿದ್ದ ಪ್ರತಿಭಟನೆಯ ತಯಾರಿ ಕುರಿತು ಚರ್ಚಿಸಲು ಯುವ ಕಾಂಗ್ರೆಸ್ ರಾಜ್ಯ ಘಟಕದ ಕಾರ್ಯಕಾರಿಣಿ ಸಭೆ ಕರೆಯಲಾಗಿತ್ತು. ಈ ಸಭೆಯಲ್ಲಿ ಗಲಾಟೆ ನಡೆದಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.