ಬುಧವಾರ, 4 ಅಕ್ಟೋಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಿ.ಕೆ ಶಿವಕುಮಾರ್‌ರನ್ನು ಭೇಟಿಯಾದ ವೈಎಸ್‌ಎರ್‌ ಪುತ್ರಿ ಶರ್ಮಿಳಾ

Published 29 ಮೇ 2023, 9:51 IST
Last Updated 29 ಮೇ 2023, 9:51 IST
ಅಕ್ಷರ ಗಾತ್ರ

ಬೆಂಗಳೂರು: ವೈಎಸ್‌ಆರ್‌ ಕಾಂಗ್ರೆಸ್‌ನ ತೆಲಂಗಾಣ ರಾಜ್ಯಾಧ್ಯಕ್ಷೆ ವೈ.ಎಸ್‌ ಶರ್ಮಿಳಾ ಅವರು ಸೋಮವಾರ ಕರ್ನಾಟಕ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಅವರನ್ನು ಭೇಟಿಯಾದರು.

ಬೆಂಗಳೂರಿನ ಸದಾಶಿವನಗರದಲ್ಲಿರುವ ಡಿ.ಕೆ ಶಿವಕುಮಾರ್‌ ಅವರ ನಿವಾಸದಲ್ಲಿ ಭೇಟಿಯಾದರು.

ಈ ಬಗ್ಗೆ ಟ್ವೀಟ್‌ ಮಾಡಿರುವ ಶರ್ಮಿಳಾ ಆವರು, ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಅವರನ್ನು ಭೇಟಿ ಮಾಡಿ, ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಕ್ಕೆ ಅಭಿನಂದನೆ ಸಲ್ಲಿಸಿದೆ ಎಂದು ಬರೆದುಕೊಂಡಿದ್ದಾರೆ.

ಡಿ.ಕೆ ಶಿವಕುಮಾರ್‌ ಹಾಗೂ ನನ್ನ ತಂದೆ ವೈಎಸ್‌ಆರ್‌ ಅವರ ಹತ್ತಿರದ ಸ್ನೇಹ ಒಡನಾಟದ ಬಗ್ಗೆ ನೆನಪುಗಳನ್ನು ಮೆಲುಕು ಹಾಕಿದೆವು ಎಂದು ಅವರು ಹೇಳಿದ್ದಾರೆ.

ತೆಲಂಗಾಣದಲ್ಲಿ ಪಕ್ಷ ಸಂಘಟನೆಯಲ್ಲಿ ತೊಡಗಿರುವ ಶರ್ಮಿಳಾ ಅವರು, ಅಲ್ಲಿನ ಆಡಳಿತರೂಢ ಬಿಆರ್‌ಎಸ್‌ ವಿರುದ್ಧ ಆಗಾಗ್ಗೆ ಕಿಡಿಕಾರುತ್ತಲೇ ಇದ್ದಾರೆ. ಹೋರಾಟದ ಮೂಲಕ ಗುರುತಿಸಿಕೊಂಡಿದ್ದಾರೆ. ಇತ್ತೀಚೆಗೆ ಪೊಲೀಸ್‌ ಸಿಬ್ಬಂದಿಯೊಬ್ಬರ ಕಪಾಳಕ್ಕೆ ಬಾರಿಸಿಯೂ ಸುದ್ದಿಯಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT