ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನ.23ರಿಂದ ರಾಜ್ಯ ಮಟ್ಟದ ಯುವಜನೋತ್ಸವ

Last Updated 1 ನವೆಂಬರ್ 2018, 20:02 IST
ಅಕ್ಷರ ಗಾತ್ರ

ತುಮಕೂರು: ನಗರದಲ್ಲಿ ನ.23ರಿಂದ 25ರ ವರೆಗೆ ರಾಜ್ಯ ಮಟ್ಟದ ಯುವಜನೋತ್ಸವ ನಡೆಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಈ ಸಂಬಂಧ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಅವರ ಅಧ್ಯಕ್ಷತೆಯಲ್ಲಿ ಗುರುವಾರ ಇಲ್ಲಿ ಪೂರ್ವಭಾವಿ ಸಭೆ ನಡೆಯಿತು.

‘ಉಡುಪಿಯಲ್ಲಿ ಕಳೆದ ಬಾರಿ ಯುವಜನೋತ್ಸವ ನಡೆದಿತ್ತು. ಕಳೆದ ಬಾರಿಗಿಂತ ವಿಭಿನ್ನವಾಗಿ ಉತ್ಸವ ಸಂಘಟಿಸಬೇಕು. ಪ್ರತಿ ಜಿಲ್ಲೆಯಿಂದ 57 ಸ್ಪರ್ಧಿಗಳು ಸೇರಿ ಒಟ್ಟು 1,710 ಸ್ಪರ್ಧಿಗಳು ಭಾಗವಹಿಸುವರು’ ಎಂದು ಮಾಹಿತಿ ನೀಡಿದರು.

‘ಯುವಜನೋತ್ಸವ ಕೇವಲ ಸ್ಪರ್ಧೆಗೆ ಸೀಮಿತವಾಗಬಾರದು. ತುಮಕೂರು ನಗರದ ಉತ್ಸವದ ರೀತಿ ನಡೆಯಬೇಕು. ಕಾರ್ಯಕ್ರಮ ಯಶಸ್ಸಿಗೆ ಜಿಲ್ಲೆಯ ವಿದ್ಯಾರ್ಥಿ ಸಮುದಾಯವನ್ನು ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು’ ಎಂದು ಹೇಳಿದರು.

ಸ್ಪರ್ಧಿಗಳಿಗೆ ಉತ್ತಮ ವಸತಿ, ಗುಣಮಟ್ಟದ ಆಹಾರ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಒದಗಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT