ಬೆಂಗಳೂರು: ‘ಕೇಂದ್ರದ ಬೆಲೆ ಏರಿಕೆ ನೀತಿಯಿಂದಾಗಿ ಅಡುಗೆ ಅನಿಲ ಸಿಲಿಂಡರ್ ಸೇರಿದಂತೆ ದಿನಬಳಕೆ ವಸ್ತುಗಳಿಗೆ ಕೆಲವೇ ದಿನಗಳಲ್ಲಿ ‘ಝಡ್ ಪ್ಲಸ್ʼ ಭದ್ರತೆ ನೀಡಬೇಕಾದ ಪರಿಸ್ಥಿತಿ ಎದುರಾಗಲಿದೆ’ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿದ ಅವರು, ‘ಹೆದ್ದಾರಿಗಳ ಟೋಲ್ ಶುಲ್ಕದಿಂದ ರೈಲು ಪ್ರಯಾಣ ದರದವರೆಗೆ, ಅಡುಗೆ ಅನಿಲ ಸಿಲಿಂಡರ್ನಿಂದ ದಿನಬಳಕೆ ವಸ್ತುಗಳವರೆಗೆ ಬೆಲೆ ಏರಿಕೆ ಮಾಡಿ ಜನಸಾಮಾನ್ಯನ ಪರಿಸ್ಥಿತಿಯನ್ನು ಮೋದಿ ಸರ್ಕಾರ ಜರ್ಜರಿತಗೊಳಿಸಿದೆ. ಇದು ಒಂದು ರೀತಿಯ ಕ್ರೂರ ನೀತಿ’ ಎಂದರು.

‘ರೈಲ್ವೆ ಹಳಿಗಳು, ಹೆದ್ದಾರಿಗಳ ಮೂಲಕ ಮೋದಿ ಸರ್ಕಾರ ದರೋಡೆ ನಡೆಸುತ್ತಿದೆ. ಜನರನ್ನು ಪಿಕ್ ಪಾಕೆಟ್ ಮಾಡುವ ಷಡ್ಯಂತ್ರವಿದು. ಈ ಕಾರಣಕ್ಕೆ ಬಿಜೆಪಿಯನ್ನು‘ಭಾರತೀಯರ ಜೇಬು ಕತ್ತರಿಸುವ ಪಕ್ಷ’ ಎಂದು ವ್ಯಾಖ್ಯಾನಿಸಬಹುದು’ ಎಂದ ಅವರು, ‘ರೈಲು ಟಿಕೆಟ್ ಏರಿಕೆಯನ್ನು ತಕ್ಷಣ ವಾಪಸ್ ಪಡೆಯಬೇಕು’ ಎಂದು ಕೇಂದ್ರ ಸರ್ಕಾರವನ್ನು ಆಗ್ರಹಿಸಿದರು.

‘ಕೇಂದ್ರ ಸರ್ಕಾರ ಏಪ್ರಿಲ್ 1ರಿಂದ ಟೋಲ್ ಶುಲ್ಕ ಹೆಚ್ಚಿಸಿತ್ತು. ಜುಲೈ 1ರಿಂದ ರೈಲು ಟಿಕೆಟ್ ದರಗಳನ್ನು ಹೆಚ್ಚಿಸಿ ಸುಮಾರು ₹700 ಕೋಟಿಯಷ್ಟು ಹೊರೆಯನ್ನು ಜನರ ಮೇಲೆ ಹಾಕಲಾಗುತ್ತಿದೆ. ಈಗ ಬೆಂಗಳೂರು ಎಲಿವೇಟೆಡ್ ಕಾರಿಡಾರ್ ಟೋಲ್ ಶುಲ್ಕವನ್ನು ಹೆಚ್ಚಿಸಿ ಬರೆ ಹಾಕಿದೆ. ಬುಲೆಟ್ ಟ್ರೈನ್ ನೀಡುತ್ತೇವೆ ಎಂದಿದ್ದ ಮೋದಿ, ರೈಲುಗಳನ್ನೇ ಮಾಯ ಮಾಡಿದ್ದಾರೆ. ಜನರ ನಿರೀಕ್ಷೆಗಳನ್ನು ಹುಸಿಗೊಳಿಸಿದ್ದಾರೆ’ ಎಂದರು.

‘2024ರ ಏಪ್ರಿಲ್ 1ರಿಂದ 2025ರ ಮಾರ್ಚ್31ರವರೆಗೆ ರೈಲಿನಲ್ಲಿ ಪ್ರಯಾಣಿಸಿದವರ ಅಂಕಿಅಂಶಗಳನ್ನು ತೆಗೆದುಕೊಂಡರೆ, ಈ ಒಂದು ವರ್ಷದಲ್ಲಿ 715 ಕೋಟಿ ಪ್ರಯಾಣ ದಾಖಲಾಗಿದೆ. 2023-24ರಲ್ಲಿ ನೈರುತ್ಯ ರೈಲ್ವೆಯಲ್ಲಿ 2.48 ಕೋಟಿ ಜನರು ಪ್ರಯಾಣಿಸಿದ್ದಾರೆ. 2023-24ರ ಸಾಲಿನಲ್ಲಿ ₹2.56 ಲಕ್ಷ ಕೋಟಿ ವಹಿವಾಟು ನಡೆಸಿದ್ದು ₹3 ಸಾವಿರ ಕೋಟಿ ನಿವ್ವಳ ಲಾಭ ಮಾಡಿದೆ. ರೈಲು ಅಪಘಾತದಿಂದ ದೇಶದಲ್ಲಿ 2.60 ಲಕ್ಷ ಜನರು ಸಾವಿಗೀಡಾಗಿದ್ದಾರೆ. ಹಿರಿಯ ನಾಗರಿಕರಿಗಿದ್ದ ರೈಲು ಟಿಕೆಟ್ ರಿಯಾಯಿತಿಯನ್ನು ಕಿತ್ತುಕೊಳ್ಳಲಾಗಿದೆ. ಬ್ಲಾಂಕೆಟ್ ನೀಡುವುದಕ್ಕೆ ಹೆಚ್ಚುವರಿ ಹಣ ನೀಡಬೇಕಾಗಿದೆ’ ಎಂದರು.

‘ಕರ್ನಾಟಕದ ಜನರಿಂದ ಕಳೆದ ಐದು ವರ್ಷಗಳಲ್ಲಿ ಟೋಲ್ ಮೂಲಕ ₹10 ಸಾವಿರ ಕೋಟಿಯನ್ನು ಕೇಂದ್ರ ಸಂಗ್ರಹಿಸಿದೆ. 2024ರಲ್ಲಿ ₹4.86 ಸಾವಿರ ಕೋಟಿ ಟೋಲ್ ಅನ್ನು ಕರ್ನಾಟಕದ ಜನ ತೆತ್ತಿದ್ದಾರೆ. ಹೊಸೂರು ಟೋಲ್ ಪ್ಲಾಜಾದಲ್ಲಿ ಮತ್ತೆ ಕೇಂದ್ರ ಸರ್ಕಾರ ಟೋಲ್ ಬೆಲೆ ಹೆಚ್ಚಳ ಮಾಡಿದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.