ಬೆಳಗಾವಿ: ಸೋಮವಾರ, ಮಂಗಳವಾರ ನಿಗದಿಯಾಗಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಭೇಟಿ ಕಾರ್ಯಕ್ರಮ ರದ್ದಾಗಿದ್ದು, ಏ.12, 13ಕ್ಕೆ ಮುಂದೂಡಲಾಗಿದೆ ಎಂದು ಪಕ್ಷದ ವಿಭಾಗೀಯ ಉಸ್ತುವಾರಿ ಈರಣ್ಣ ಕಡಾಡಿ ತಿಳಿಸಿದರು.

ಸೋಮವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಅಮಿತ್ ಶಾ ಅವರು ರಾಜ್ಯಸಭೆ ಕಲಾಪದಲ್ಲಿ ಪಾಲ್ಗೊಳ್ಳಬೇಕಿರುವುದರಿಂದ ಕಾರ್ಯಕ್ರಮ ಮುಂದೂಡಲಾಗಿದೆ’ ಎಂದರು.

ಹಾವೇರಿ ಜಿಲ್ಲೆಯ ಕಾಗಿನೆಲೆಯಲ್ಲಿ ಏ.3ರಂದು ಸಂಜೆ ಆಯೋಜಿಸಲಾಗಿರುವ ಹಿಂದುಳಿದ ವರ್ಗಗಳ ಸಮಾವೇಶ ನಿಗದಿಯಂತೆ ನಡೆಯಲಿದೆ. ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ ಸಿಂಗ್ ಚೌಹಾಣ್ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು.

ಬೆಳಗಾವಿ ಹಾಗೂ ಬಾಗಲಕೋಟೆಯಲ್ಲಿ ಶಾ ಅವರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಇದನ್ನೂ ಓದಿ...

ಏಪ್ರಿಲ್ 2ಕ್ಕೆ ನಂದಗಡಕ್ಕೆ ಶಾ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.