ಮಂಗಳೂರು: ಬೆಂಜನಪದವಿನಲ್ಲಿ ನಡೆದ ಎಸ್ಡಿಪಿಐ ಮುಖಂಡ ಅಶ್ರಫ್ ಕಲಾಯಿ ಕೊಲೆ ಪ್ರಕರಣದ 9 ಆರೋಪಿಗಳ ಪೈಕಿ, ಒಬ್ಬನಿಗೆ ಷರತ್ತು ಬದ್ಧ ಜಾಮೀನು ನೀಡಿರುವ ನಗರದ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ, ಉಳಿದ 8 ಆರೋಪಿಗಳ ಅರ್ಜಿ ತಿರಸ್ಕರಿಸಿದೆ.

ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭರತ್ ಕುಮ್ಡೇಲು, ದಿವ್ಯರಾಜ್ ಶೆಟ್ಟಿ, ಪವನ್ಕುಮಾರ್, ಶಿವಪ್ರಸಾದ್, ರಂಜಿತ್, ಸಂತೋಷ್, ಅಭಿನ್ ರೈ, ಪ್ರದೀಪ್, ರಮೇಶ್ಕುಮಾರ್ ಎಂಬುವವರನ್ನು ಬಂಧಿಸಲಾಗಿತ್ತು.

ಆರೋಪಿಗಳ ಮೊಬೈಲ್ ಇಡಲು ಸಹಕಾರ ನೀಡಿದ್ದ ಆರೋಪದ ಮೇಲೆ ಬಂಧಿತನಾಗಿರುವ ರಮೇಶ್ಕುಮಾರ್ಗೆ ಮಾತ್ರ ಷರತ್ತು ಬದ್ಧ ಜಾಮೀನು ನೀಡಲಾಗಿದೆ. ಜೂನ್ 21ರಂದು ಈ ಕೊಲೆ ನಡೆದಿತ್ತು. ಈ ಘಟನೆಯ ಬಳಿಕ ಜಿಲ್ಲೆಯಲ್ಲಿ ಕೋಮು ದಳ್ಳುರಿ ಮತ್ತಷ್ಟು ಬಿಗಡಾಯಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.