ಬೆಂಗಳೂರು: ಯುವಜನ ಸೇವಾ ಮತ್ತು ಕ್ರೀಡಾ ನಿರ್ದೇಶನಾಲಯವನ್ನು `ಯುವ ಸಬಲೀಕರಣ ಮತ್ತು ಕ್ರೀಡಾ ನಿರ್ದೇಶನಾಲಯ' ಎಂಬುದಾಗಿ ಹಾಗೂ ಯುವಜನ ಸೇವಾ ಇಲಾಖೆಯನ್ನು `ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ' ಎಂದು ಮರುನಾಮಕರಣ ಮಾಡಿ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ.
ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರ ಅಧ್ಯಕ್ಷತೆಯಲ್ಲಿ ಈಚೆಗೆ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.