ಬೆಂಗಳೂರು: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಸ್ಥಾನದ ಅಭ್ಯರ್ಥಿ ಎಂದು ಜೆಡಿಎಸ್ ಘೋಷಿಸುವ ಸಾಧ್ಯತೆ ಇದೆ. ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಇಲ್ಲಿ ಸೋಮವಾರ ಆರಂಭವಾಗಿದ್ದು, ಮಂಗಳವಾರ ಅಧಿಕೃತ ಘೋಷಣೆ ಹೊರಬೀಳುವ ಸಾಧ್ಯತೆ ಇದೆ.

ಇದಲ್ಲದೆ, ದೇಶದ ರಾಜಕೀಯ ಪರಿಸ್ಥಿತಿ ಹಾಗೂ ಆರ್ಥಿಕ ವಿಚಾರಗಳ ಕುರಿತೂ ಕೆಲವು ನಿರ್ಣಯಗಳನ್ನು ಸಭೆ, ಮಂಗಳವಾರ ತೆಗೆದುಕೊಳ್ಳಲಿದೆ ಎಂದು ಗೊತ್ತಾಗಿದೆ.

ಕಾಂಗ್ರೆಸ್ ಹಾಗೂ ಬಿಜೆಪಿ ಆಂತರಿಕ ಕಚ್ಚಾಟ ಎದುರಿಸುತ್ತಿರುವ ಕಾರಣ, ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಮುಖ್ಯಮಂತ್ರಿ ಅಭ್ಯರ್ಥಿ ಯಾರು ಎಂಬುದನ್ನು ಘೋಷಿಸುವ ಸ್ಥಿತಿಯಲ್ಲಿ ಈಗ ಇಲ್ಲ. ಈ ಪರಿಸ್ಥಿತಿಯ ಲಾಭ ಪಡೆದುಕೊಳ್ಳಲು ಕುಮಾರಸ್ವಾಮಿ ಅವರನ್ನು ಜೆಡಿಎಸ್ನ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಿಸಬೇಕು ಎಂಬ ಸಲಹೆಯನ್ನು ಪಕ್ಷದ ರಾಜ್ಯ ಘಟಕದ ಕಾರ್ಯಾಧ್ಯಕ್ಷ ಪಿ.ಜಿ.ಆರ್. ಸಿಂಧ್ಯ ಅವರು ಮುಂದಿಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಈ ಸಲಹೆಗೆ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ ಸಮ್ಮತಿ ಸೂಚಿಸಿದ್ದಾರೆ. ನಿರ್ಣಯಗಳ ಕರಡು ಸಿದ್ಧಪಡಿಸಲು ಸಿಂಧ್ಯ ಅವರ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ. ರಾಜ್ಯದ ಈಗಿನ ರಾಜಕೀಯ ಪರಿಸ್ಥಿತಿ ಹಾಗೂ ರಾಷ್ಟ್ರದ ಆರ್ಥಿಕ ಪರಿಸ್ಥಿತಿ ಕುರಿತು ಸಭೆ ಚರ್ಚಿಸಿದೆ.

ಸೋಮವಾರದ ಸಭೆಯ ನಂತರ ಸುದ್ದಿಗಾರರ ಜೊತೆ ಮಾತನಾಡಿದ ಪಕ್ಷದ ವಕ್ತಾರ ವೈ.ಎಸ್.ವಿ. ದತ್ತ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ಗಡ್ಕರಿ ಅವರು, ಸ್ವಾಮಿ ವಿವೇಕಾನಂದ ಹಾಗೂ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಅವರ ಬೌದ್ಧಿಕ ಮಟ್ಟವನ್ನು ಹೋಲಿಸಿ ಮಾತನಾಡಿದ್ದನ್ನು ಕಟುವಾಗಿ ಟೀಕಿಸಿದರು. `ಗಡ್ಕರಿ ಅವರು ವಿವೇಕಾನಂದರಂಥ ಮಹಾನ್ ಚೇತನವನ್ನು ಅವಮಾನಿಸಿದ್ದಾರೆ. ಅವರು ರಾಷ್ಟ್ರದ ಕ್ಷಮೆ ಕೋರಬೇಕು~ ಎಂದು ಒತ್ತಾಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.