ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಏಳು ತಿಂಗಳಲ್ಲಿ 516 ರೈತರ ಆತ್ಮಹತ್ಯೆ

Last Updated 5 ಅಕ್ಟೋಬರ್ 2015, 19:34 IST
ಅಕ್ಷರ ಗಾತ್ರ

ಬೆಂಗಳೂರು: ಏಳು ತಿಂಗಳಲ್ಲಿ (ಏಪ್ರಿಲ್‌ 1ರಿಂದ ಇದೇ 3ರ ವರೆಗೆ) ರಾಜ್ಯದಲ್ಲಿ ಒಟ್ಟು 516 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮುಖ್ಯ ಕಾರ್ಯದರ್ಶಿ ಕೌಶಿಕ್‌ ಮುಖರ್ಜಿ ಅವರಿಗೆ ಕೃಷಿ ಇಲಾಖೆ ಸಲ್ಲಿಸಿರುವ ವರದಿಯಲ್ಲಿ ವಿವರಗಳಿವೆ. 233 ಪ್ರಕರಣಗಳ ತನಿಖೆ ಪೂರ್ಣಗೊಂಡಿದೆ. ಅವುಗಳಲ್ಲಿ 134 ಪ್ರಕರಣ ಗಳನ್ನು ಪರಿಹಾರ ನೀಡಲು ಯೋಗ್ಯ ಎಂದು ತೀರ್ಮಾನಿಸಲಾಗಿದೆ.

 ಏಪ್ರಿಲ್‌ 1ರಿಂದ ಇದೇ 3ರ ವರೆಗೆ ರಾಜ್ಯದಲ್ಲಿ ಒಟ್ಟು 516 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮುಖ್ಯ ಕಾರ್ಯದರ್ಶಿ ಕೌಶಿಕ್‌ ಮುಖರ್ಜಿ ಅವರಿಗೆ ಕೃಷಿ ಇಲಾಖೆ ಸಲ್ಲಿಸಿರುವ ವರದಿಯಲ್ಲಿ ಈ ವಿವರಗಳಿವೆ. 233 ಪ್ರಕರಣಗಳ ತನಿಖೆ ಪೂರ್ಣಗೊಂಡಿದೆ. ಅವುಗಳಲ್ಲಿ 134 ಪ್ರಕರಣಗಳನ್ನು ಪರಿಹಾರ ನೀಡಲು ಯೋಗ್ಯ ಎಂದು ತೀರ್ಮಾನಿಸಲಾಗಿದೆ. 101 ಪ್ರಕರಣಗಳಲ್ಲಿ ಮೃತರ ಸಂಬಂಧಿಕರಿಗೆ ತಲಾ ₹2 ಲಕ್ಷ ಪರಿಹಾರ ನೀಡಲಾಗಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಪರಿಹಾರ ನೀಡಲು ಯೋಗ್ಯ ಇಲ್ಲ ಎನ್ನುವ ಕಾರಣಕ್ಕೆ 99 ಪ್ರಕರಣಗಳನ್ನು ತಿರಸ್ಕರಿಸಲಾಗಿದೆ. ಇನ್ನೂ 283 ಪ್ರಕರಣಗಳ ತನಿಖೆ ನಡೆಯುತ್ತಿದೆ. ಕೆಲವು ಪ್ರಕರಣಗಳಲ್ಲಿ ರೈತರಲ್ಲದವರೂ ಸೇರಿದ್ದು, ದಾಖಲೆಗಳ ಪರಿಶೀಲನೆ ನಡೆಯುತ್ತಿದೆ ಎಂದು ವರದಿಯಲ್ಲಿ ಹೇಳಲಾಗಿದೆ. ಮಂಡ್ಯ ಜಿಲ್ಲೆಯಲ್ಲಿ ಅತಿ ಹೆಚ್ಚು ಅಂದರೆ 56 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೊಡಗು ಜಿಲ್ಲೆಯಲ್ಲಿ ಇಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಅಂಶವೂ ವರದಿಯಲ್ಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT