ಬೆಂಗಳೂರು: ಶನಿವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ ರಾಜ್ಯದಾದ್ಯಂತ ಒಣಹವೆ ಮುಂದುವರೆದಿದೆ. ಚಾಮರಾಜನಗರದಲ್ಲಿ ಕನಿಷ್ಠ ಉಷ್ಣಾಂಶ 13.8 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ಮುನ್ಸೂಚನೆ: ಮುಂದಿನ 48 ಗಂಟೆಗಳ ಕಾಲ ಕರಾವಳಿ, ದಕ್ಷಿಣ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.