ಬೆಂಗಳೂರು: ಭಾನುವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ ರಾಜ್ಯದ ಒಂದೆರಡು ಕಡೆ ಮಳೆಯಾಗಿದೆ. ಉತ್ತರ ಒಳನಾಡಿನ ಗರಿಷ್ಠ ಉಷ್ಣಾಂಶದಲ್ಲಿ ಇಳಿಕೆ ಕಂಡು ಬಂದಿದೆ. ಬೀದರನಲ್ಲಿ ಗರಿಷ್ಠ ಉಷ್ಣಾಂಶ 41.4 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ಮುನ್ಸೂಚನೆ: ಮುಂದಿನ 48 ಗಂಟೆಗಳ ಕಾಲ ರಾಜ್ಯದ ಕರಾವಳಿ ಸೇರಿದಂತೆ ದಕ್ಷಿಣ ಹಾಗೂ ಉತ್ತರ ಒಳನಾಡಿನಲ್ಲಿ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.