ಬೆಂಗಳೂರು: ಸ್ಯಾಕ್ಸೋಫೋನ್ ವಾದನದಲ್ಲಿ ವಿಶ್ವಮಾನ್ಯತೆ ಪಡೆದಿರುವ ಡಾ. ಕದ್ರಿ ಗೋಪಾಲನಾಥ್ ಅವರು 2012ರ ಸಾಲಿನ `ವೀಣೆ ರಾಜಾರಾವ್ ರಾಷ್ಟ್ರೀಯ ಪ್ರಶಸ್ತಿ~ಗೆ ಆಯ್ಕೆಯಾಗಿದ್ದಾರೆ.

ಕರ್ನಾಟಕ ಸಂಗೀತಕ್ಕೆ ಸ್ಮರಣೀಯ ಕೊಡುಗೆ ನೀಡಿದ ಗಾನಕಲಾಭೂಷಣ ವೀಣೆ ರಾಜಾರಾಯರ ಜನ್ಮಶತಮಾನೋತ್ಸವ ಸಂದರ್ಭದಲ್ಲಿ ಸ್ಥಾಪಿಸಲಾದ ಈ ಪ್ರಶಸ್ತಿಯನ್ನು ಪ್ರತಿವರ್ಷ ಒಬ್ಬ ಪ್ರತಿಭಾವಂತ ಕಲಾವಿದರಿಗೆ ನೀಡಲಾಗುತ್ತದೆ. ಪ್ರಶಸ್ತಿಯು 25 ಸಾವಿರ ರೂಪಾಯಿ ಮತ್ತು ರಜತ ಪ್ರಶಸ್ತಿ ಫಲಕ ಒಳಗೊಂಡಿದೆ ಎಂದು `ವೀಣೆ ರಾಜಾರಾವ್ ಸ್ಮಾರಕ ಪ್ರತಿಷ್ಠಾನ~ದ ಪ್ರಕಟಣೆ ತಿಳಿಸಿದೆ.

ಪ್ರಶಸ್ತಿ ಪ್ರದಾನ ಸಮಾರಂಭವು ಇದೇ 23ರ ಶುಕ್ರವಾರ ಬೆಂಗಳೂರಿನಲ್ಲಿ ನಡೆಯಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.